Categories: CrimeLatest

ಹಾಸನದಲ್ಲಿ ಹಣ ಕೇಳಿದ್ದಕ್ಕೆ ದಾಳಿ: ಬೇಕರಿ ಮಾಲೀಕನ ಮೇಲೆ ಮರಣಾಂತಿಕ ಹಲ್ಲೆ, ಸಿಸಿ ಟಿವಿಯಲ್ಲಿ ದೃಶ್ಯ ಸೆರೆ..!

ಹಾಸನ: ತಿಂಡಿ ಖರೀದಿಸಿ ಹಣ ನೀಡದೆ ತೆರಳುತ್ತಿದ್ದವರನ್ನು ಪ್ರಶ್ನಿಸಿದ ಕಾರಣಕ್ಕೆ ಬೇಕರಿ ಮಾಲೀಕನ ಮೇಲೆ ದಾಳಿಯ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮಧ್ಯಾಹ್ನವೇ ಮದ್ಯದ ಅಮಲಿನಲ್ಲಿ ಇದ್ದ ಯುವಕರ ಗುಂಪೊಂದು ಬೇಕರಿಗೆ ನುಗ್ಗಿ ಮಾಲೀಕ ಹಾಗೂ ಮತ್ತೋರ್ವ ವ್ಯಕ್ತಿಗೆ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ.

ಹಳ್ಳಿಮೈಸೂರು ಕ್ರಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 373 ಸಮೀಪದ ಬೇಕರಿಯಲ್ಲಿ ಈ ಘಟನೆ ನಡೆದಿದೆ. ಕೆಲ ಯುವಕರು ತಿಂಡಿ ಖರೀದಿಸಿ ಹಣ ಕೊಡದೇ ಹೋಗುತ್ತಿದ್ದನ್ನು ಪ್ರಶ್ನಿಸಿದ ವೇಳೆ ಗಲಾಟೆ ಆರಂಭವಾಗಿದೆ. ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಹಲ್ಲೆಗೆ ತಿರುಗಿದ್ದು, ಮೂವರು ಸೇರಿ ಬೇಕರಿ ಮಾಲೀಕ ಹಾಗೂ ಪ್ರಶ್ನಿಸಿದ ಮತ್ತೋರ್ವ ವ್ಯಕ್ತಿಯ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಈ ಕೃತ್ಯ ಸಂಪೂರ್ಣವಾಗಿ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ನಿರ್ದಯ ವರ್ತನೆ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಘಟನೆ ಬಳಿಕ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಪ್ರಕರಣ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ದಾಳಿಗಳು ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎಬ್ಬಿಸಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago