Categories: CorruptionLatest

ಲಂಚ ಸ್ವೀಕರಿಸುವಾಗ ದಾಳಿ – ಕಾರಿನಲ್ಲಿ ಪರಾರಿಯಾಗುತ್ತಿದ್ದ ಅಧಿಕಾರಿಯನ್ನು ಬೆನ್ನತ್ತಿ ಬಂಧಿಸಿದ ಲೋಕಾಯುಕ್ತ

ಕೋಲಾರದಲ್ಲಿ ಲಂಚ ಸ್ವೀಕರಿಸುವ ವೇಳೆ ನಡೆದ ಲೋಕಾಯುಕ್ತ ದಾಳಿ ಸಿನಿಮೀಯ ತಿರುವು ಪಡೆದುಕೊಂಡಿದ್ದು, ಪರಾರಿಯಾಗಲು ಯತ್ನಿಸಿದ ಸಹಾಯಕ ಔಷಧ ನಿಯಂತ್ರಕಿ ಕೊನೆಗೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಔಷಧ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪರವಾನಗಿ ನೀಡುವ ಸಂಬಂಧ ₹35 ಸಾವಿರ ಲಂಚ ಕೇಳಲಾಗಿದೆ ಎಂಬ ಆರೋಪದ ಮೇಲೆ ಟೇಕಲ್‌ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿತು.

ಲಂಚದ ಹಣವನ್ನು ಕಾರಿನಲ್ಲೇ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆ್ಯಂಟೊನಿ ಜಾನ್ ನೇತೃತ್ವದ ತಂಡ ದಾಳಿ ನಡೆಸಿತು. ದಾಳಿ ನಡೆಯುತ್ತಿದ್ದಂತೆಯೇ ಸಹಾಯಕ ಔಷಧ ನಿಯಂತ್ರಕಿ ಜೆ. ಶ್ಯಾಮಲಾ ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರು. ತಮ್ಮೊಂದಿಗೆ ಕಚೇರಿಯ ‘ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್ ಹಾಗೂ ಚಾಲಕನನ್ನು ಕರೆದುಕೊಂಡು ಕಾರಿನಲ್ಲಿ ಪರಾರಿಯಾಗಿದರು.

ಬಂಗಾರಪೇಟೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರನ್ನು ಲೋಕಾಯುಕ್ತ ಪೊಲೀಸರು ಸುಮಾರು 15 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿದರು. ಕೊನೆಗೆ ತಮ್ಮ ವಾಹನವನ್ನು ಆರೋಪಿಗಳ ಕಾರಿಗೆ ಅಡ್ಡ ನಿಲ್ಲಿಸಿ ಅವರನ್ನು ವಶಕ್ಕೆ ಪಡೆದರು.

ಈ ಘಟನೆಯಲ್ಲಿ ಜೆ. ಶ್ಯಾಮಲಾ, ಶ್ರೀನಿವಾಸ್ ಮತ್ತು ಕಾರಿನ ಚಾಲಕ ಮಹಾಂತೇಶ್ ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅಧೀಕ್ಷಕ ಆ್ಯಂಟೊನಿ ಜಾನ್ ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago