Categories: CrimeLatest

ಕೋರ್ಟ್ ತಡೆಯಾಜ್ಞೆ ಇಲ್ಲದಿದ್ದರೂ ರಸ್ತೆ ಬಂದ್ ಮಾಡುವ ಪ್ರಯತ್ನ? ಅಂಕೋಲ ತಾಲೂಕಿನ ಹೊನ್ನೆಬೈಲ್‌ನಲ್ಲಿ ಮೂವರ ವಿರುದ್ಧ FIR ದಾಖಲು.

ಅಂಕೋಲಾ ತಾಲೂಕಿನ ಹೊನ್ನೆಬೈಲ್ ಗ್ರಾಮದ ಸರ್ವೇ ನಂ. 214/5ರ ಸಾರ್ವಜನಿಕ ರಸ್ತೆ ವಿವಾದ ಇದೀಗ ತಾರಕಕ್ಕೇರಿದ್ದು, ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸಿ ದೂರುದಾರರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜಮೀನಿನ ಮಾಲೀಕರಾದ ಮಂಗಲಾ ಮೋಹನ್ ನಾಯ್ಕ್, ಅವರ ಮಗ ಅಮರ್ ಮೋಹನ್ ನಾಯ್ಕ್ ಹಾಗೂ ತಂಗಿ ಲಕ್ಷ್ಮಿ ಮೋನಪ್ಪ ನಾಯ್ಕ್ ಎಂಬುವವರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನ್ಯ ಜೆ.ಎಮ್.ಎಫ್.ಸಿ ಅಂಕೋಲಾ ನ್ಯಾಯಾಲಯದ ಪಿಸಿಆರ್. ನಂ. 180/2026ರ ಆದೇಶದ ಅನ್ವಯ ಪೊಲೀಸರು ಈ ತನಿಖೆ ಕೈಗೊಂಡಿದ್ದಾರೆ. ಹೊನ್ನೆಬೈಲ್ ಗ್ರಾಮದ ನಿವಾಸಿ ಕೃಷ್ಣ ನಾಗಪ್ಪ ನಾಯ್ಕ್ ಸೇರಿದಂತೆ ಸ್ಥಳೀಯ ಸಾರ್ವಜನಿಕರು ಅನಾದಿಕಾಲದಿಂದಲೂ ಓಡಾಡುತ್ತಿದ್ದ ರಸ್ತೆಗೆ, ಜಮೀನಿನ ಮಾಲೀಕರು ಕಳೆದ 3-4 ವರ್ಷಗಳಿಂದ ನಿರಂತರವಾಗಿ ಅಡ್ಡಿಪಡಿಸುತ್ತಾ ಬಂದಿದ್ದರು. ಈ ಹಿಂದೆ 2024 ರಲ್ಲಿ ಜಮೀನಿನ ಮಾಲೀಕರು ಏಕಾಏಕಿ ರಸ್ತೆಗೆ ಕೆಂಪು ಕಲ್ಲುಗಳನ್ನು ಸುರಿದು ಸಾರ್ವಜನಿಕರ ಸಂಚಾರವನ್ನು ಬಂದ್ ಮಾಡಿದಾಗ, ಏಕೈಕ ರಸ್ತೆಯನ್ನು ನಂಬಿಕೊಂಡಿರುವ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ್ದರು.. ಅಂದು ಸ್ಥಳಕ್ಕೆ ಧಾವಿಸಿದ್ದ ತಹಶೀಲ್ದಾರರು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕಲ್ಲುಗಳನ್ನು ತೆರವುಗೊಳಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಈ ಬೆಳವಣಿಗೆಯಿಂದ ಸಿಟ್ಟಾದ ಜಮೀನಿನ ಮಾಲೀಕರು ಅಧಿಕಾರಿಗಳನ್ನೇ ಪ್ರತಿವಾದಿಗಳನ್ನಾಗಿ ಮಾಡಿ ಅಂಕೋಲಾ ಸಿವಿಲ್ ನ್ಯಾಯಾಲಯದಲ್ಲಿ OS 125/2024 ರಂತೆ ತಡೆಯಾಜ್ಞೆ ಕೋರಿ ದಾವೆ ಹೂಡಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ಚಾಲ್ತಿಯಲ್ಲಿದ್ದರೂ, ಸಾರ್ವಜನಿಕ ರಸ್ತೆ ಬಂದ್ ಮಾಡಲು ನ್ಯಾಯಾಲಯ ಯಾವುದೇ ತಡೆಯಾಜ್ಞೆ ನೀಡಿರಲಿಲ್ಲ. ಆದರೂ ಜಮೀನಿನ ಮಾಲೀಕರೇ ತಮ್ಮ ಪರವಾಗಿ ಯಾವುದೇ ತಡೆಯಾಜ್ಞೆ ಇಲ್ಲದಿರುವುದು ಗೊತ್ತಿದ್ದರೂ ಸಹ ಪುನಃ ಪುನಃ ರಸ್ತೆಗೆ ದೊಡ್ಡ ಕಲ್ಲುಗಳನ್ನು ಹಾಕಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಕೊಡುತ್ತಾ ಬಂದಿದ್ದಾರೆ.

ಕಳೆದ ಏಪ್ರಿಲ್ 23ರಂದು ರಸ್ತೆ ಬಂದ್ ಮಾಡಿದ್ದನ್ನು ಧೈರ್ಯದಿಂದ ಪ್ರಶ್ನಿಸಲು ಹೋದ ನೊಂದ ದೂರುದಾರ ಕೃಷ್ಣ ನಾಯ್ಕ್ ಅವರನ್ನು ಸಾರ್ವಜನಿಕವಾಗಿ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕೊಲೆ ಮಾಡುವುದಾಗಿ ಭೀಕರ ಬೆದರಿಕೆ ಹಾಕಿದ್ದಾರೆ. ಜಮೀನಿನ ಮಾಲೀಕರು ತಾವೇ ಕೋರ್ಟ್ ಮೆಟ್ಟಿಲೇರಿದ್ದರೂ ಕಾನೂನಿಗೆ ಕಿಂಚಿತ್ತೂ ಗೌರವ ನೀಡದೆ, ನಿರಂತರವಾಗಿ ತೊಂದರೆ ಕೊಡುತ್ತಾ ಬಂದಿರುವುದರಿಂದಲೇ ಸ್ಥಳದಲ್ಲಿ ಇಷ್ಟೊಂದು ದೊಡ್ಡ ಅನಾಹುತ ಮತ್ತು ಅಶಾಂತಿಯ ವಾತಾವರಣ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಈ ದೌರ್ಜನ್ಯಕ್ಕೆ ಬ್ರೇಕ್ ಹಾಕಲು ನ್ಯಾಯಾಲಯದ ಆದೇಶದ ಬೆನ್ನಲ್ಲೇ ಪೋಲಿಸ್ ಇಲಾಖೆ ಮೂರು ಜನ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

1 day ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago