Categories: CorruptionLatest

ನಕಲಿ ದಾಖಲೆಗಳಿಂದ ಉದ್ಯೋಗ ಪಡೆಯಲು ಯತ್ನ – ರಾಜ್ಯದಲ್ಲಿ 20 ಅತಿಥಿ ಉಪನ್ಯಾಸಕರು ಪತ್ತೆ..!

ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಉದ್ಯೋಗ ಪಡೆಯಲು ಪ್ರಯತ್ನಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ. ಈ ಪರಿಶೀಲನೆಯ ವೇಳೆ 20 ಮಂದಿ ಅತಿಥಿ ಉಪನ್ಯಾಸಕರು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದಾದ್ಯಂತ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಪರಿಶೀಲನೆಯಲ್ಲಿ ಪಿಎಚ್‌ಡಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 10 ಮಂದಿ, ವಿಶೇಷ ಚೇತನ ಪ್ರಮಾಣಪತ್ರ ನಕಲಿ ನೀಡಿದ 4 ಮಂದಿ, ಸ್ನಾತಕೋತ್ತರ ಪದವಿ ಅಂಕಪಟ್ಟಿ ನಕಲಿ ಸಲ್ಲಿಸಿದ 2 ಮಂದಿ ಹಾಗೂ ಎಂ.ಫಿಲ್‌ ನಕಲಿ ಪ್ರಮಾಣಪತ್ರ ನೀಡಿದ ಒಬ್ಬರನ್ನು ಪತ್ತೆಹಚ್ಚಲಾಗಿದೆ.

ಜಿಲ್ಲಾವಾರು ಪತ್ತೆ: ಜಿಲ್ಲಾವಾರು ನೋಡಿದರೆ ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ ನಾಲ್ವರು ಸಿಕ್ಕಿಬಿದ್ದಿದ್ದಾರೆ. ಕಲಬುರಗಿಯ ನಾಲ್ವರು ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿರುವುದು ಪತ್ತೆಯಾಗಿದ್ದು, ಬೆಳಗಾವಿಯಲ್ಲಿ ಮೂವರು ವಿಶೇಷ ಚೇತನ ಪ್ರಮಾಣಪತ್ರ ಹಾಗೂ ಒಬ್ಬರು ಸ್ನಾತಕೋತ್ತರ ಅಂಕಪಟ್ಟಿ ನಕಲಿ ಸಲ್ಲಿಸಿರುವುದು ತಿಳಿದುಬಂದಿದೆ.

ಇನ್ನು ಬಾಗಲಕೋಟೆಯಲ್ಲಿ ಇಬ್ಬರು ನಕಲಿ ಸ್ನಾತಕೋತ್ತರ ಪ್ರಮಾಣಪತ್ರ ನೀಡಿರುವುದು ಪತ್ತೆಯಾಗಿದೆ. ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ನಕಲಿ ವಿಶೇಷ ಚೇತನ ಪ್ರಮಾಣಪತ್ರ ಸಲ್ಲಿಸಿದ್ದು, ಶಿವಮೊಗ್ಗ, ಹಾವೇರಿ, ವಿಜಯನಗರ, ಉಡುಪಿ, ಕೋಲಾರ ಹಾಗೂ ಹಾಸನ ಜಿಲ್ಲೆಗಳಲ್ಲಿ ತಲಾ ಒಬ್ಬರು ನಕಲಿ ಪಿಎಚ್‌ಡಿ ದಾಖಲೆಗಳನ್ನು ನೀಡಿದ್ದಾರೆ. ಉತ್ತರ ಕನ್ನಡದಲ್ಲಿ ಒಬ್ಬರು ನಕಲಿ ಎಂ.ಫಿಲ್ ಪ್ರಮಾಣಪತ್ರ ನೀಡಿದ್ದರೆ, ಕೋಲಾರ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸ್ನಾತಕೋತ್ತರ ಅಂಕಪಟ್ಟಿ ನಕಲಿ ಸಲ್ಲಿಸಿರುವುದು ಪತ್ತೆಯಾಗಿದೆ.

ಕ್ರಿಮಿನಲ್ ಪ್ರಕರಣ ಎಚ್ಚರಿಕೆ: ಅತಿಥಿ ಉಪನ್ಯಾಸಕರು ನೇಮಕವಾಗುವ ವೇಳೆ ಸಲ್ಲಿಸಿದ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರಿಗೆ ಸೂಚಿಸಲಾಗಿದೆ. ಪರಿಶೀಲನೆ ವೇಳೆ 20 ಮಂದಿ ಅತಿಥಿ ಉಪನ್ಯಾಸಕರ ದಾಖಲೆಗಳು ನಕಲಿಯಾಗಿರುವುದು ದೃಢಪಟ್ಟಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ನಕಲಿ ಪ್ರಮಾಣಪತ್ರಗಳ ಆಧಾರದಲ್ಲಿ ಉದ್ಯೋಗ ಪಡೆದಿರುವವರು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

11 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

15 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

18 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

23 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago