Crime

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪ್ರಯತ್ನ: ಶಂಕಿತ ಮಹಿಳೆ ಪೊಲೀಸ್ ವಶಕ್ಕೆ

ಬಾಗಲಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ಸಿನಲ್ಲಿ ಸಿಮೆಂಟ್ ಚೀಲದ ಆವರಣದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಶಕೀರಾ ಬೇಪಾರಿ ಎಂಬ ಮಹಿಳೆಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ನವನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಘಟನೆ ಬಾಗಲಕೋಟೆ ನಗರದ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು, ಶಕೀರಾ ಎಂಬವರು ಬಸ್‌ವೊಂದರಲ್ಲಿ ಸಿಮೆಂಟ್ ಚೀಲದಲ್ಲಿ ಶಂಕಿತ ಗೋಮಾಂಸವನ್ನು ತುಂಬಿಸಿಕೊಂಡು ಪ್ರಯಾಣ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಬಸ್ ಚಾಲಕನ ಗಮನಕ್ಕೆ ವಿಷಯ ಬಂದ ಕೂಡಲೆ ಅವರು ಶಕೀರಾರನ್ನು ಬಸ್ಸಿನಿಂದ ಇಳಿಸಿದ್ದಾರೆ.

ಆ ಬಳಿಕ, ಬಸ್ ನಿರ್ವಾಹಕ ಟಂಟಂ ವಾಹನವನ್ನು ಕರೆಸಿ ಶಂಕಿತ ಮಾಂಸವನ್ನು ಸ್ಥಳಾಂತರಿಸಲು ಯತ್ನಿಸುತ್ತಿದ್ದರು. ಈ ಘಟನೆ ಬಗ್ಗೆ ಹಿಂದೂ ಸಂಘಟನೆ ಸದಸ್ಯರಿಗೆ ಮಾಹಿತಿ ಲಭಿತವಾಗುತ್ತಿದ್ದಂತೆಯೇ ಅವರು ಸ್ಥಳಕ್ಕಾಗಮಿಸಿ ಶಕೀರಾರನ್ನು ತಡೆದು ಪೊಲೀಸರು ಸೇರಿಸಿದರು.

ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಾಂಸವನ್ನು ಪರೀಕ್ಷೆಗಾಗಿ ಫೊರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಪೂರ್ಣ ತನಿಖೆಯ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

3 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago