Latest

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಶಿರಸಿ: ಜಮೀನು ವ್ಯಾಜ್ಯದ ವಿಷಯವಾಗಿ ವ್ಯಕ್ತಿಯೊಬ್ಬರ ಕೊಲೆಗೆ ಪ್ರಯತ್ನಿಸಿದ ಆರೋಪಿ ಪರಮೇಶ್ವರ ಪಿಳ್ಳೆ ಅಪರಾಧಿ ಎಂದು ಸಾಭೀತಾಗಿದೆ. ಈ ಹಿನ್ನಲೆ ನ್ಯಾಯಾಲಯ ಪರಮೇಶ್ವರ ಪಿಳ್ಳೆ ಅವರಿಗೆ ಶಿಕ್ಷೆಯನ್ನು ಪ್ರಕಟಿಸಿದೆ.
ಶಿರಸಿ ಮರಾಠಿಕೊಪ್ಪದ ನಿವಾಸಿ ಪರಮೇಶ್ವರ ಕನ್ನಾ ಪಿಳ್ಳೆ ಹಾಗೂ ಈಶ್ವರ ಕೃಷ್ಣಾ ದೇವಾಡಿಗ ನಡುವೆ ವೈಮನಸ್ಸಿತ್ತು. ಭೂ ವಿಷಯವಾಗಿ ಶುರುವಾದ ದ್ವೇಷ ತಾರಕಕ್ಕೇರಿದ್ದು, ಪರಮೇಶ್ವರ ಪಿಳ್ಳೆ ಅವರು ಈಶ್ವರ ದೇವಾಡಿಗ ಅವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿ ತನಿಖೆ ನಡೆಯಿತು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಸರ್ಕಾರಿ ಅಭಿಯೋಜಕ ರಾಜೇಶ ಎಂ ಮಳಗಿಕರ್ ಅವರು ಈಶ್ವರ ದೇವಾಡಿಗ ಅವರ ಪರವಾಗಿ ವಕಾಲತು ಮಾಡಿದರು. ಕೊಲೆ ಯತ್ನ ನಡೆದ ಅವಧಿಯಲ್ಲಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿದ್ದ ಪಿಎಸ್‌ಐ ಭೀಮಾಶಂಕರ ಸಿನ್ನೂರ್ ಸಂಗಣ್ಣ ಅವರು ನೀಡಿದ ವರದಿ ಹಾಗೂ ದಾಖಲೆಗಳ ಬಗ್ಗೆ ನ್ಯಾಯಾಲಯಕ್ಕೆ ಮನವರಕೆ ಮಾಡಿದರು. ಪಿಎಸ್‌ಐ ರತ್ನಾ ಕುರಿ, ಪೊಲೀಸ್‌ ಸಿಬ್ಬಂದಿ ಹನುಮಂತ ರಾಜಪ್ಪ ಬೋವಿ ಹಾಗೂ ರಮೇಶ ಮುಚ್ಚಂಡಿ ಅವರು ನ್ಯಾಯಾಲಯಕ್ಕೆ ಪ್ರಮುಖ ದಾಖಲಾತಿ ಒದಗಿಸಿದರು.ವಾದ ಆಲಿಸಿದ ನ್ಯಾಯಾಲಯ ಜಮೀನು ಪಾಲಿನ ವಿಷಯದಲ್ಲಿ ನಡೆದ ಜಗಳದಲ್ಲಿ ಈಶ್ವರ ದೇವಾಡಿಗ ಅವರಿಗೆ ಪರಮೇಶ್ವ‌ರ್ ಪಿಳ್ಳೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದು ಸತ್ಯ ಎಂದು ಘೋಷಿಸಿತು. ಪರಮೇಶ್ವರ ಪಿಳ್ಳೆ ಅವರಿಗೆ 5 ಸಾವಿರ ರೂ ದಂಡವನ್ನು ವಿಧಿಸಿದ್ದು, ತಪ್ಪಿದರೆ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿತು.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago