Crime

ಮಸೀದಿಯಲ್ಲಿ 5 ವರ್ಷದ ಬಾಲಕಿಗೆ ಅತ್ಯಾಚಾರಕ್ಕೆ ಯತ್ನ: 2 ವರ್ಷಗಳ ನಂತರ ಬೆಳಕಿಗೆ !

ಬೆಳಗಾವಿ, ಆಗಸ್ಟ್ 6: ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಸೀದಿಯೊಂದರಲ್ಲಿ 5 ವರ್ಷದ ಬಾಲಕಿಯ ಮೇಲೆ ಮೌಲ್ವಿ ಅತ್ಯಾಚಾರಕ್ಕೆ ಯತ್ನಿಸಿದ ಘೋರ ಘಟನೆ ಎರಡು ವರ್ಷಗಳ ನಂತರ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಇದೀಗ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಈ ಅಪಘಾತ 2023ರ ಅಕ್ಟೋಬರ್ 5ರಂದು ಸಂಭವಿಸಿದ್ದು, ಆರೋಪಿಯಾಗಿರುವ ಮೌಲ್ವಿ ತುಫೇಲ್ ಅಹ್ಮದ್ ದಾದಾಫೀರ್ ವಿರುದ್ಧ ಇದೀಗ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ, ಈ ಪ್ರಕರಣವು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋವೊಂದರಿಂದ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಈ ಪೋಸ್ಟ್‌ನಲ್ಲಿ ಆಡಿಯೋ ಮತ್ತು ದೃಶ್ಯವೊಂದರ ಮೂಲಕ ಬಾಲಕಿಯ ಮೇಲೆ ವ್ಯಕ್ತಿಯೊಬ್ಬನು ದುಷ್ಟ ಕೃತ್ಯಕ್ಕೆ ಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿತ್ತು.

ಪೋಸ್ಟ್‌ ಲಭ್ಯವಾದ ಕೂಡಲೇ ಸಿಇಎನ್ ಪೊಲೀಸ್ ಇಲಾಖೆ ಮೂಲಕ ತನಿಖೆ ಆರಂಭಿಸಲಾಗಿದ್ದು, ವಿಡಿಯೋದಲ್ಲಿನ ಸ್ಥಳದ ವಿವರ ಆಧರಿಸಿ ಮುರಗೋಡ ಠಾಣೆಗೆ ಮಾಹಿತಿ ನೀಡಲಾಗಿತ್ತು. ಹೆಚ್ಚಿನ ತನಿಖೆಯಲ್ಲಿ ಪ್ರಕರಣ 2023ರ ಅಕ್ಟೋಬರ್ 5ರಂದು ನಡೆದಿರುವುದು ದೃಢಪಟ್ಟಿದೆ.

ಆರೋಪಿಯು ಮಹಾಲಿಂಗಪುರದಿಂದ ಆಗಮಿಸಿದ ಬಳಿಕ, ತನ್ನ ಸಂಬಂಧಿತ ಮಹಿಳೆಯ ಮನೆಯಲ್ಲಿ ವಾಸ್ತವ್ಯಕ್ಕೆ ಇರುತ್ತಿದ್ದ ವೇಳೆ ಈ ಜಘನ್ಯ ಕೃತ್ಯಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ತಕ್ಷಣ ಸ್ಥಳೀಯರು ಬಾಲಕಿಯ ತಂದೆಯನ್ನು ಕರೆಸಿ ವಿಚಾರಿಸಿದ್ದರೂ, ಮಗುವಿನ ಕುಟುಂಬ ಪೊಲೀಸರು ದೂರು ನೀಡದೆ ಬಿಟ್ಟಿದ್ದರು.

ವಿಡಿಯೋ ವೈರಲ್ ಆಗಿದ ನಂತರ ಜಿಲ್ಲಾಧಿಕಾರಿಗಳ ಮಕ್ಕಳ ರಕ್ಷಣಾ ಘಟಕ ಮಧ್ಯೆ ಪ್ರವೇಶಿಸಿ ಪ್ರಕರಣದ ಮಹತ್ವವನ್ನು ಮನವರಿಕೆ ಮಾಡಿಸಿದೆ. ಪೋಷಕರು ಮೊದಲಿಗೆ ಕೇಸ್ ದಾಖಲಿಸಲು ಸಮ್ಮತಿಸದ ಹಿನ್ನೆಲೆಯಲ್ಲಿ, ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯಡಿ ಸ್ವಯಂಪ್ರೇರಿತ ದೂರು ದಾಖಲಿಸಿ, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತುಫೇಲ್ ಅಹ್ಮದ್ ದಾದಾಫೀರ್ ಮೂಲತಃ ವೇಲ್ಡಿಂಗ್ ಕೆಲಸ ಮಾಡುತ್ತಿದ್ದವನಾಗಿದ್ದು, ಸಮಯ ಸಿಕ್ಕಾಗ ಮಸೀದಿಗಳಲ್ಲಿ ಧಾರ್ಮಿಕ ಭಾಷಣಗಳನ್ನು ನೀಡುತ್ತಿದ್ದ ಎನ್ನಲಾಗಿದೆ.

ಈ ಪ್ರಕರಣವು ಮೌಲ್ವಿಯ ಭಯಾನಕ ಮುಖವೊಂದು ಸಾರ್ವಜನಿಕ ಮುಂದಿಡುವಂತಾಗಿದ್ದು, ಪೊಲೀಸರು ಇದರ ಕುರಿತು ಗಂಭೀರ ತನಿಖೆ ಮುಂದುವರೆಸಿದ್ದಾರೆ. ಜತೆಗೆ, ಈ ರೀತಿಯ ಘಟನೆಗಳು ಹೆಚ್ಚು ವರ್ಷಗಳ ನಂತರ ಬೆಳಕಿಗೆ ಬರುವುದು ಯಾಕೆ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ಬೇಕಾದ ಸಂದರ್ಭ ಉಂಟಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago