Crime

ಗ್ಯಾಸ್‌ ಡೆಲಿವರಿ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!: ಆರೋಪಿಯ ವಿರುದ್ಧ ಪ್ರಕರಣ ದಾಖಲು

ಚಾಮರಾಜನಗರ, ಮೇ 30 – ಗ್ಯಾಸ್ ಸಿಲಿಂಡರ್‌ ಡೆಲಿವರಿ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಪ್ರವೇಶಿಸಿದ ವ್ಯಕ್ತಿ, ಆಕೆಯ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾದ ದುರ್ಘಟನೆ ಚಾಮರಾಜನಗರ ತಾಲ್ಲೂಕಿನ ಸಂತಮಾರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಮಹೇಶ್ ಎಂಬಾತ ಗ್ಯಾಸ್ ಏಜೆನ್ಸಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದನು. ಈತ, ಸಿಲಿಂಡರ್‌ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ. ಮಹಿಳೆ ಸಿಲಿಂಡರ್‌ ಬುಕ್ ಮಾಡಿಲ್ಲವೆಂದು ತಿಳಿಸಿದ್ದರೂ, “ಗ್ಯಾಸ್ ಖಾಲಿಯಾದರೆ ಇಟ್ಟುಕೊಳ್ಳಿ” ಎಂದು ಬಲವಂತವಾಗಿ ಒತ್ತಾಯಿಸಿದ ಮಹೇಶ್ ಅವರ ಮಾತಿಗೆ ಮಡಿದು ಮಹಿಳೆ 950 ರೂ. ನೀಡಿ ಸಿಲಿಂಡರ್‌ ಪಡೆದುಕೊಂಡಿದ್ದರು.

ಆದರೆ ಬಳಿಕವೂ ಸ್ಥಳ ತೊರೆಯದ ಆರೋಪಿಯು, ಅಡುಗೆ ಮನೆಗೆ ಸರಿಯಾಗಿ ಬೆಳಕು ಬರುತ್ತಿದೆಯೇ ಎಂದು ತಪಾಸಣೆ ಮಾಡುವ ನೆಪದಲ್ಲಿ ಫೋಟೋ ತೆಗೆದು, ಇ-ಕೆವೈಸಿಗಾಗಿ ಬೇಕು ಎಂದು ಮನವಿ ಮಾಡಿದ. ಮನೆಯೊಳಗೆ ನುಗ್ಗಿದ ಮಹೇಶ್, ಅಡುಗೆ ಮನೆಗೆ ಮಹಿಳೆಯನ್ನು ಕರೆದುಕೊಂಡು ಹೋಗಿ, ಆಕೆಯ ಭಾವನೆಗಳ ಜೊತೆ ಆಟವಾಡುತ್ತಾ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಪ್ರತಿರೋಧ ತೋರಿದ ಮಹಿಳೆಯನ್ನು ಬೆದರಿಸುವ ಮೂಲಕ, ಕೊಲೆಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ ತಕ್ಷಣದ ವೇಳೆ ಚಾಕುವಿನಿಂದ ಹಲ್ಲೆಗೂ ಮುಂದಾಗಿದ್ದಾನೆ ಎಂಬ ಆರೋಪ ಇದೆ.

ಘಟನೆ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಸಂತಮಾರಹಳ್ಳಿ ಪೊಲೀಸರು ಮಹೇಶ್ ವಿರುದ್ಧ ಪಿಡಿಇ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.‌

ಸ್ಥಳೀಯರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಸುರಕ್ಷತೆ ಕುರಿತು ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂಬ ಮಾತು ಕೇಳಿಬರುತ್ತಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago