ಬೆಳಗಾವಿಯ ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ ಕಿರಿಯ ಎಂಬಿಬಿಎಸ್ ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳ ಪರ ಹಾಜರಾತಿ ಹಾಕಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ಒಂದು ತಿಂಗಳ ಕಾಲ ಅಮಾನತು ಮಾಡಲಾಗಿದೆ.

ಹಿರಿಯರ ಒತ್ತಡಕ್ಕೆ ಲಗ್ಗೆಯಾದ ಕಿರಿಯರು
ಮಾರ್ಚ್ 14ರಂದು ಸರ್ಜರಿ ವಿಭಾಗದ ಅಂತಿಮ ತರಗತಿಯ ವೇಳೆ, ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಕೆಲ ವಿದ್ಯಾರ್ಥಿಗಳನ್ನು ಬೆದರಿಸಿ, ತಮ್ಮ ಪರ ಹಾಜರಾತಿ ಹಾಕುವಂತೆ ಒತ್ತಾಯಿಸಿದ್ದರು. ಈ ವಿಷಯವನ್ನು ಸಹಾಯಕ ಪ್ರಾಧ್ಯಾಪಕರು ಗಮನಿಸಿ, ಪ್ರಾಚಾರ್ಯ ಡಾ. ಗುರುಶಾಂತಪ್ಪ ಯಲಗಚ್ಚಿನ ಅವರಿಗೆ ತಿಳಿಸಿದ್ದಾರೆ.

ಅಮಾನತು ಆದೇಶ
ವಿಷಯ ತಿಳಿದ ಕೆಎಂಸಿ-ಆರ್‌ಐ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ, ರ್ಯಾಗಿಂಗ್ ನಿಯಂತ್ರಣ ಸಮಿತಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಸಮಿತಿ ತನಿಖೆ ನಡೆಸಿ ಆರೋಪ ಸಾಬೀತು ಮಾಡಿದ ಹಿನ್ನೆಲೆಯಲ್ಲಿ, ನಿರ್ದೇಶಕರು ಐದು ವಿದ್ಯಾರ್ಥಿಗಳನ್ನು ಒಂದು ತಿಂಗಳ ಕಾಲ ಅಮಾನತು ಮಾಡಿದರು.

ನಿಯಮ ಉಲ್ಲಂಘನೆಗೆ ಕಠಿಣ ಕ್ರಮ
ಈ ಕುರಿತು ಪ್ರತಿಕ್ರಿಯಿಸಿದ ಡಾ. ಕಮ್ಮಾರ, “ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಪರ ಹಾಜರಾತಿ ಹಾಕಿರುವುದು ದೃಢಪಟ್ಟಿದೆ. ವೈದ್ಯಕೀಯ ಶಿಕ್ಷಣ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

error: Content is protected !!