Latest

ಶಿವರಾಜ್ಕುಮಾರ್ ವಿರುದ್ಧ ಆಡಿಯೋ ವಿವಾದ : ಮನು ಕುಟುಂಬ ಸಮೇತ ಕ್ಷಮೆಯ ವಿನಂತಿ.

ಬೆಂಗಳೂರು: ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ನಟ ಮಡೆನೂರು ಮನು ಇದೀಗ ಸಂಕಟದ ಸ್ಥಿತಿಗೆ ತಲುಪಿದ್ದಾರೆ.

ಆಡಿಯೋ ವೈರಲ್ ಆದ ಬಳಿಕ ಶಿವರಾಜ್ ಅಭಿಮಾನಿಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮನು ವಿರುದ್ಧ ಆಕ್ರೋಶದ ಸುರಿಮಳೆ ಸುರಿದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮನು, “ಆ ವಿಡಿಯೋ ನನ್ನದ್ದಲ್ಲ. ಯಾರೋ ಕುಯುಕ್ತ ಉದ್ದೇಶದಿಂದ ಎಡಿಟ್ ಮಾಡಿದ ಆಡಿಯೋ ಅದು,” ಎಂದು ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದಾರೆ.

ಇದೀಗ, ವಿವಾದಕ್ಕೆ ತೆರೆ ಹಾಕಲು ಮನು ಮೆಚ್ಚಿನ ಹೀರೋ ಶಿವರಾಜ್‌ಕುಮಾರ್ ಅವರಲ್ಲಿ ನೇರವಾಗಿ ಕ್ಷಮೆ ಕೇಳಲು ಮುಂದಾಗಿದ್ದಾರೆ. ಆದರೆ ಅವರು ಶಿವಣ್ಣನನ್ನು ಭೇಟಿಯಾಗಲು ವಿಫಲವಾಗಿದ್ದಾರೆ.

ಅದರಿಂದ ಇಂದು ಬೆಳಿಗ್ಗೆಯಿಂದಲೇ ಮನು ಕುಟುಂಬ ಸಮೇತರಾಗಿ ಶಿವಣ್ಣ ನಿವಾಸದ ಎದುರು ಕಾಯುತ್ತಿದ್ದಾರೆ. “ನಾನು ಅವ್ರ ಫ್ಯಾನ್, ಅವರ ವಿರುದ್ಧ ನಾನೇನು ತಪ್ಪು ಮಾತು ಮಾತನಾಡಿಲ್ಲ. ಆದರೆ ಅವರ ಭಾವನೆಗೆ ಗಾಯವಾಗಿದೆ ಎಂದಾದರೆ ಕ್ಷಮೆ ಕೇಳುತ್ತೇನೆ,” ಎಂದು ಮಾಧ್ಯಮದವರೊಡನೆ ಮನು ಮಾತನಾಡಿದ್ದಾರೆ.

ಈ ಸಂಪೂರ್ಣ ಘಟನೆಯ ವಿಡಿಯೋ ಈಗ ವೈರಲ್ ಆಗಿದ್ದು, ಮನು ಕುಟುಂಬದ ತೀವ್ರ ಸಂಕಟ ಹಾಗೂ ಮಾನಸಿಕ ಒತ್ತಡವನ್ನೂ ಬಿಚ್ಚಿಡುತ್ತಿದೆ. ಆದರೆ ಈ ಕುರಿತು ಶಿವರಾಜ್‌ಕುಮಾರ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

10 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

23 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

23 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago