ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಮಂಗಳವಾರ ಅಘಾತಕಾರಿ ಹತ್ಯೆ ನಡೆದಿದೆ. ಮೈಸೂರು ಜಿಲ್ಲೆಯ ತಲಕಾಡು ಮೂಲದ ದರ್ಶನ್ (28) ಎಂಬ ಆಟೋ ಚಾಲಕನನ್ನು ಚಾಕು ಇರಿದು ಹತ್ಯೆ ಮಾಡಲಾಗಿದೆ.
ಜಿಗಣಿ ಸಮೀಪದ ಹಿನ್ನಕ್ಕಿ ಪ್ರದೇಶದಲ್ಲಿ ತನ್ನ ಅಕ್ಕ ಮತ್ತು ಭಾವನೊಂದಿಗೆ ವಾಸಿಸುತ್ತಿದ್ದ ದರ್ಶನ್, ರಾತ್ರಿ ತನ್ನ ಭಾವನನ್ನು ಕೆಲಸದ ಸ್ಥಳದಲ್ಲಿ ಇಳಿಸಿದ್ದ ನಂತರ ಬೊಮ್ಮಸಂದ್ರ ಕಡೆಗೆ ತೆರಳಿದಾಗ ಈ ದಾಳಿಗೆ ಶಿಕಾರಾಗಿದ್ದಾರೆ.
ಅದೃಷ್ಟವಶಾತ್, ಬೊಮ್ಮಸಂದ್ರ ಬಳಿ ದುಷ್ಕರ್ಮಿಗಳೊಂದು ದಾಳಿ ನಡೆಸಿ, ದರ್ಶನ್ ಅವರ ಮೇಲೆ ಚಾಕುಗಳಿಂದ ಇರುತ್ತಾ ಸ್ಥಳದಲ್ಲಿಯೇ ಕೊಲೆ ಮಾಡಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ.
ಘಟನೆ ಸ್ಥಳಕ್ಕೆ ಡಿಸಿಪಿ ಸಾರಾ ಫಾತೀಮಾ, ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಸತೀಶ್ ಹಾಗೂ ಹೆಬ್ಬಗೋಡಿ ಇನ್‌ಸ್ಪೆಕ್ಟರ್ ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಶ್ವಾನದಳ ಹಾಗೂ ಫೊರೆನ್ಸಿಕ್ ತಜ್ಞರುವೂ ಸಕ್ರಿಯವಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಪೊಲೀಸರು ಎಲ್ಲ ಕಡೆಯಿಂದಲೂ ಮಾಹಿತಿ ಸಂಗ್ರಹಿಸಿ, ಹತ್ಯೆ ಹಿಂದೆ ಇದ್ದ ಕಾರಣ ಹಾಗೂ ಆರೋಪಿಗಳ ಹಿನ್ನಲೆಯಲ್ಲಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…
ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…
ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…
ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…