Categories: Latest

ಜುಲೈನಲ್ಲಿ ಬೆಸ್ಕಾಂ ಗ್ರಾಹಕರಿಗೆ ಸರಾಸರಿ ವಿದ್ಯುತ್ ಬಿಲ್: ಮೀಟರ್ ರೀಡಿಂಗ್ ಸ್ಥಗಿತ, ಮನೆ-ಮನೆ ಪರಿಶೀಲನೆ ಆರಂಭ

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ನಡೆಸುವ ಉದ್ದೇಶದಿಂದ ಬೆಸ್ಕಾಂ ತನ್ನ ಮೀಟರ್ ರೀಡರ್‌ಗಳನ್ನು ವಿಶೇಷ ಕಾರ್ಯಕ್ಕೆ ನಿಯೋಜಿಸಿದೆ. ಇದರ ಪರಿಣಾಮವಾಗಿ ಜುಲೈ ತಿಂಗಳಿನಲ್ಲಿ ಸಾಮಾನ್ಯ ಮೀಟರ್ ರೀಡಿಂಗ್ ನಡೆಯುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜುಲೈ ತಿಂಗಳ ವಿದ್ಯುತ್ ಬಿಲ್ ಅನ್ನು ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಸಿದ್ಧಪಡಿಸಿ, ಗ್ರಾಹಕರಿಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ.

ಆದರೆ, ಎಚ್‌ಟಿ (HT) ಗ್ರಾಹಕರು, 40 ಎಚ್‌ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್‌ಟಿ (LT) ಗ್ರಾಹಕರು, ಸೋಲಾರ್ ರೂಫ್‌ಟಾಪ್ (SRTPV) ಬಳಕೆದಾರರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಂದಿನಂತೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆಯೇ ಬಿಲ್ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಜುಲೈ ತಿಂಗಳಲ್ಲಿ ನೀಡುವ ಸರಾಸರಿ ಬಿಲ್‌ನಲ್ಲಿ ಯಾವುದೇ ಹೆಚ್ಚುವರಿ ಅಥವಾ ಕಡಿಮೆ ಮೊತ್ತ ಕಂಡುಬಂದರೆ, ಆಗಸ್ಟ್ ತಿಂಗಳಿನಿಂದ ನೈಜ ಮೀಟರ್ ರೀಡಿಂಗ್ ಪುನರಾರಂಭವಾದ ಬಳಿಕ ಮುಂದಿನ ಬಿಲ್‌ಗಳಲ್ಲಿ ಅಗತ್ಯ ಹೊಂದಾಣಿಕೆ ಮಾಡಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.

ಇದೇ ವೇಳೆ, ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದ ಪರಿಶೀಲನೆಗಾಗಿ ಮನೆಗಳಿಗೆ ಭೇಟಿ ನೀಡುವ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ. ಪರಿಶೀಲನೆ ವೇಳೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ ಅಥವಾ ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ತೋರಿಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

37 minutes ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

2 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago