Latest

ಭ್ರಷ್ಟಾಚಾರ ಆರೋಪದ ಹಿನ್ನೆಲೆ: ಕುಂದಾಪುರ ಎ.ಸಿ ಮಹೇಶ್ ಚಂದ್ರ ಅಮಾನತು

ಕುಂದಾಪುರ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೆ ಅವರ ಮೇಲೆ ಇಲಾಖಾ ವಿಚಾರಣೆ ಮುಂದುವರಿಯಲಿದೆ.

ಉಡುಪಿ ಜಿಲ್ಲಾಧಿಕಾರಿಗಳು ಮಹೇಶ್ ಚಂದ್ರ ವಿರುದ್ಧ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು, ಅದನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರಿಗೆ ನೀಡಲಾಗಿದೆ.

ಮಹೇಶ್ ಚಂದ್ರ ಅವರು ಈ ಹುದ್ದೆಗೆ ಬಂದ ಮೇಲೆ ಹಲವಾರು ವಿವಾದಗಳಿಗೆ ಕಾರಣವಾಗಿದ್ದರು. ಅವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ವಲಯದಲ್ಲಿ ಅವರ ನೇಮಕಾತಿಯ ಕುರಿತು ಅಸಮಾಧಾನ ವ್ಯಕ್ತವಾಗಿತ್ತು. ಹಿಂದಿನ ಶಾಸಕರೊಬ್ಬರ ಪ್ರಭಾವದಿಂದಲೇ ಈ ಹುದ್ದೆಗೆ ಅವರು ಬಂದಿದ್ದಾರೆ ಎಂಬ ಮಾತುಗಳು ಪ್ರಸಾರವಾಗಿದ್ದವು.

ಇತ್ತೀಚಿನ ವರ್ಷಗಳಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಈ ಹುದ್ದೆಯಲ್ಲಿದ್ದ ರಶ್ಮಿ ಅವರ ಆಕಸ್ಮಿಕ ವರ್ಗಾವಣೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಈಗ ಮಹೇಶ್ ಚಂದ್ರ ಅಮಾನತು ಆದ ಹಿನ್ನೆಲೆಯಲ್ಲಿ ಈ ಹುದ್ದೆ ಮತ್ತೆ ಸುದ್ದಿಯಲ್ಲಿದೆ.

ಮಹೇಶ್ ಚಂದ್ರ ಅವರು ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅಮಾನತು ಆದದ್ದು ಗಮನಾರ್ಹವಾಗಿದೆ. ಅವರ ಮೇಲೆ ನಡೆದಿರುವ ಈ ಕ್ರಮದಿಂದಾಗಿ ಕಚೇರಿ ಮಟ್ಟದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಸರ್ಕಾರ ಈ ಹಂತದಲ್ಲಿ ಮುಂದಿನ ತನಿಖಾ ಪ್ರಕ್ರಿಯೆ ಎತ್ತಹಾಗಿರುತ್ತದೆ ಎಂಬುದನ್ನು ಗಮನಿಸುವ ಅಗತ್ಯವಿದೆ.

 

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

3 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago