Categories: CrimeLatest

ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ

ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ರಾಯಚೂರು ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಗೆ ಸ್ಥಳಾಂತರಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ, ಇಸ್ಮಾಯಿಲ್ ಹವ್ವಾ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಶಿಕ್ಷೆ ವಿಧಿಸಲಾಗಿದ್ದು, ಉಳಿದ ಐದು ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

ಆರೋಪಿಯ ಅಪರಾಧ ಹಿನ್ನೆಲೆಯನ್ನು ಪರಿಗಣಿಸಿದ ಪೊಲೀಸ್ ಇಲಾಖೆ, ಭಟ್ಕಳ ನಗರ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಈ ಹಿನ್ನೆಲೆಯಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಗಡಿಪಾರು ಕ್ರಮ ಕೈಗೊಳ್ಳುವಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ವಿಚಾರಣೆ ನಡೆಸಿ, ಅಭಿಯೋಜನೆ ಮತ್ತು ಪ್ರತಿವಾದಿಗಳ ವಾದ ಆಲಿಸಿದ ಬಳಿಕ ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ 2026ರ ಜೂನ್ 17ರಿಂದ ಜಾರಿಗೆ ಬರುವಂತೆ ಆರು ತಿಂಗಳ ಕಾಲ ಗಡಿಪಾರು ಆದೇಶ ಹೊರಡಿಸಲಾಗಿದೆ.

ಆದೇಶದಂತೆ ಭಟ್ಕಳ ಶಹರ ಪೊಲೀಸ್ ಠಾಣೆಯ ಅಧಿಕಾರಿಗಳು ಇಸ್ಮಾಯಿಲ್ ಹವ್ವಾನನ್ನು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದು, ಮುಂದಿನ ಆರು ತಿಂಗಳ ಅವಧಿಯಲ್ಲಿ ಅವರು ಅಲ್ಲಿಯೇ ವಾಸ್ತವ್ಯ ಹೂಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago