Latest

ಬ್ಯಾಡ್ಮಿಂಟನ್ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ.

ಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಪ್ರಸಿದ್ಧಿಯಾದ ಬೆಂಗಳೂರಿನಲ್ಲಿ ಮತ್ತೊಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಬ್ಯಾಡ್ಮಿಂಟನ್ ತರಬೇತುದಾರರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.

ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬ ವ್ಯಕ್ತಿ, ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದನು. ಈ ವೇಳೆಯಲ್ಲಿ ತರಬೇತಿಯ ಹೆಸರಿನಲ್ಲಿ ಹಲವು ಬಾಲಕಿಯರ ಬಳಿ ನಿಕಟವಾಗಿ ಸಂಪರ್ಕ ಬೆಳೆಸಿದ್ದನು. ಈ ಪೈಕಿ ಒಬ್ಬ ಅಪ್ರಾಪ್ತೆ ಬಾಲಕಿಯನ್ನು ನಂಬಿಸಿ, ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.

ಬಾಲಕಿ ಒಂದು ವೇಳೆ ರಜೆಗಾಗಿ ತನ್ನ ಅಜ್ಜಿಯ ಮನೆಗೆ ಹೋದಾಗ, ತನ್ನ ಮೊಬೈಲ್‌ನಲ್ಲಿ ಸುರೇಶ್‌ಗೆ ಕಳುಹಿಸಿರುವ ನಗ್ನ ಚಿತ್ರವೊಂದನ್ನು ಅಜ್ಜಿ ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಈ ವಿಷಯವನ್ನು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಬಳಿಕ ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಕೋಚ್ ಸುರೇಶ್‌ನ ಕೃತ್ಯಗಳು ಬಯಲಾಗಿ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ, ಆತನ ಮೊಬೈಲ್‌ನಲ್ಲಿ 13ರಿಂದ 16 ವರ್ಷದೊಳಗಿನ ಹಲವು ಬಾಲಕಿಯರ ನಗ್ನ ಚಿತ್ರಗಳು ಮತ್ತು ವಿಡಿಯೋಗಳು ಪತ್ತೆಯಾಗಿವೆ. ಈ ಮೂಲಕ ಮತ್ತಷ್ಟು ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಪೊಲೀಸರು ಸುರೇಶ್ ಬಾಲಾಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, 8 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ತನಿಖೆಯ ಭಾಗವಾಗಿ, ಅಪ್ರಾಪ್ತೆಯರ ಹೇಳಿಕೆ ದಾಖಲಿಸಲಾಗುತ್ತಿದೆ. ಇನ್ನುಳಿದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದರೆ, ಅದರೂ ಕೂಡ ಬಯಲಾಗುವ ನಿರೀಕ್ಷೆಯಿದೆ.

ಈ ಘಟನೆ ಬೆಂಗಳೂರಿನ ಕ್ರೀಡಾ ಕ್ಷೇತ್ರದಲ್ಲಿ ಭಾರಿ  ಉಂಟುಮಾಡಿದ್ದು, ಪೋಷಕರು ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರವಾಗಿ ಯೋಚಿಸುವ ಅಗತ್ಯವಿದೆ ಎಂಬ ಚರ್ಚೆ ನಡೆಯುತ್ತಿದೆ.

nazeer ahamad

Recent Posts

ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ

ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…

5 hours ago

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…

5 hours ago

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…

16 hours ago

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

21 hours ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

22 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

1 day ago