ಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಪ್ರಸಿದ್ಧಿಯಾದ ಬೆಂಗಳೂರಿನಲ್ಲಿ ಮತ್ತೊಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 26 ವರ್ಷದ ಬ್ಯಾಡ್ಮಿಂಟನ್ ತರಬೇತುದಾರರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.
ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬ ವ್ಯಕ್ತಿ, ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದನು. ಈ ವೇಳೆಯಲ್ಲಿ ತರಬೇತಿಯ ಹೆಸರಿನಲ್ಲಿ ಹಲವು ಬಾಲಕಿಯರ ಬಳಿ ನಿಕಟವಾಗಿ ಸಂಪರ್ಕ ಬೆಳೆಸಿದ್ದನು. ಈ ಪೈಕಿ ಒಬ್ಬ ಅಪ್ರಾಪ್ತೆ ಬಾಲಕಿಯನ್ನು ನಂಬಿಸಿ, ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ.
ಬಾಲಕಿ ಒಂದು ವೇಳೆ ರಜೆಗಾಗಿ ತನ್ನ ಅಜ್ಜಿಯ ಮನೆಗೆ ಹೋದಾಗ, ತನ್ನ ಮೊಬೈಲ್‌ನಲ್ಲಿ ಸುರೇಶ್‌ಗೆ ಕಳುಹಿಸಿರುವ ನಗ್ನ ಚಿತ್ರವೊಂದನ್ನು ಅಜ್ಜಿ ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಈ ವಿಷಯವನ್ನು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಬಳಿಕ ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಕೋಚ್ ಸುರೇಶ್‌ನ ಕೃತ್ಯಗಳು ಬಯಲಾಗಿ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ, ಆತನ ಮೊಬೈಲ್‌ನಲ್ಲಿ 13ರಿಂದ 16 ವರ್ಷದೊಳಗಿನ ಹಲವು ಬಾಲಕಿಯರ ನಗ್ನ ಚಿತ್ರಗಳು ಮತ್ತು ವಿಡಿಯೋಗಳು ಪತ್ತೆಯಾಗಿವೆ. ಈ ಮೂಲಕ ಮತ್ತಷ್ಟು ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಪೊಲೀಸರು ಸುರೇಶ್ ಬಾಲಾಜಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, 8 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ತನಿಖೆಯ ಭಾಗವಾಗಿ, ಅಪ್ರಾಪ್ತೆಯರ ಹೇಳಿಕೆ ದಾಖಲಿಸಲಾಗುತ್ತಿದೆ. ಇನ್ನುಳಿದ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದರೆ, ಅದರೂ ಕೂಡ ಬಯಲಾಗುವ ನಿರೀಕ್ಷೆಯಿದೆ.
ಈ ಘಟನೆ ಬೆಂಗಳೂರಿನ ಕ್ರೀಡಾ ಕ್ಷೇತ್ರದಲ್ಲಿ ಭಾರಿ ಉಂಟುಮಾಡಿದ್ದು, ಪೋಷಕರು ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರವಾಗಿ ಯೋಚಿಸುವ ಅಗತ್ಯವಿದೆ ಎಂಬ ಚರ್ಚೆ ನಡೆಯುತ್ತಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…