Latest

ಮೈಕ್ರೊ ಪೈನಾನ್ಸ್ ದೌರ್ಜನ್ಯ ವಿರುದ್ಧ ಬಾಗೇಪಲ್ಲಿ ಮಹಿಳೆಯರ ಆಕ್ರೋಶ

ಬಾಗೇಪಲ್ಲಿ: ಮೈಕ್ರೊ ಪೈನಾನ್ಸ್ ಸಂಸ್ಥೆಗಳ ಸಾಲ ವಸೂಲಿ ಕ್ರಮಗಳ ವಿರುದ್ಧ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಮುಖ್ಯರಸ್ತೆಯಲ್ಲಿ ಜಾಥಾ ನಡೆಸಿದ ಮಹಿಳೆಯರು, ನಂತರ ತಾಲೂಕು ಕಚೇರಿಯ ಎದುರು ಧರಣಿ ನಡೆಸಿ ತಹಸೀಲ್ದಾರ್ ಮನಿಷಾ ಎನ್. ಪತ್ರಿ ಅವರಿಗೆ ಮನವಿ ಸಲ್ಲಿಸಿದರು.

ಬಲವಂತದ ವಸೂಲಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಸಂಘಟನೆಯ ಸಂಚಾಲಕಿ ಸಾವಿತ್ರಮ್ಮ ಮಾತನಾಡಿ, ಮೈಕ್ರೊ ಪೈನಾನ್ಸ್ ಸಂಸ್ಥೆಗಳು ಮಹಿಳೆಯರಿಗೆ ಬಲವಂತವಾಗಿ ಸಾಲ ನೀಡಿ ನಂತರ ಅದನ್ನು ವಾಪಸು ಪಡೆಯುವ ವೇಳೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಬಗ್ಗೆ ಕಿಡಿಕಾರಿದರು. ಇಂತಹ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳು ಪಡೆದಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು ಮತ್ತು ಈ ರೀತಿಯ ದೌರ್ಜನ್ಯಕ್ಕೆ ತಡೆಯೊಡ್ಡಲು ಕಟ್ಟುನಿಟ್ಟಿನ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಪಾರದರ್ಶಕತೆ ಮತ್ತು ಸರ್ಕಾರದ ಹಸ್ತಕ್ಷೇಪದ ಅಗತ್ಯ

ಸಿಪಿಐಎಂ ಮುಖಂಡ ಚನ್ನರಾಯಪ್ಪ ಮಾತನಾಡಿ, ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಾರ್ಯವಿಧಾನದಲ್ಲಿ ಪಾರದರ್ಶಕತೆ ಕಾಪಾಡಲು ಹೊಸ ನಿಯಮಾವಳಿ ರೂಪಿಸಬೇಕೆಂದರು. ಈಗಾಗಲೇ ವಸೂಲಿ ಮಾಡಿರುವ ಅಧಿಕ ಬಡ್ಡಿ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕಡಿಮೆ ಬಡ್ಡಿಯಲ್ಲಿ ನೇರವಾಗಿ ಬಡವರಿಗೆ ಸಾಲ ನೀಡುವ ವ್ಯವಸ್ಥೆ ಮಾಡಬೇಕು. ಸ್ವಯಂ ಉದ್ಯೋಗ ಪ್ರೋತ್ಸಾಹಿಸುವ ಮಹಿಳೆಯರಿಗೆ ಕನಿಷ್ಠ ₹5 ಲಕ್ಷದವರೆಗೆ ಸರಳ ನಿಯಮಾವಳಿಯಡಿ ಬ್ಯಾಂಕ್ ಸಾಲ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದಿಂದ ಕಾನೂನು ಜಾರಿಗೆ ಒತ್ತಾಯ

ಪ್ರತಿಭಟನೆಯ ಭಾಗವಾಗಿ ಜನವಾದಿ ಮಹಿಳಾ ಸಂಘಟನೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿತು. ಮೈಕ್ರೊ ಪೈನಾನ್ಸ್ ಸಂಸ್ಥೆಗಳ ಬಲವಂತದ ವಸೂಲಿ ಕ್ರಮಗಳಿಗೆ ನಿಯಂತ್ರಣ ಹಾಕಲು ಹೊಸ ಕಾನೂನು ಜಾರಿಯಾಗಬೇಕು. ಮಹಿಳಾ ಸ್ವಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳಿಗೆ ಕಡಿಮೆ ಬಡ್ಡಿದರದಲ್ಲಿ ದೀರ್ಘಾವಧಿ ಸಾಲವನ್ನು ಸಬ್ಸಿಡಿ ಸಹಿತವಾಗಿ ಸರ್ಕಾರವೇ ವಿತರಿಸಬೇಕೆಂದು ಸಾವಿತ್ರಮ್ಮ ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಮುಖಂಡರಾದ ಸೋಮಶೇಖರ್, ಎಸ್. ಲಕ್ಷ್ಮಣರೆಡ್ಡಿ ಹಾಗೂ ಸಂತ್ರಸ್ತ ಮಹಿಳೆಯರು ಸೇರಿದಂತೆ ಹಲವಾರು ಜನರು ಭಾಗವಹಿಸಿದರು.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago