Latest

ಕಾರಿನಲ್ಲಿ ಸಾಗವಾನಿ ಸಾಗಾಟ: ಇಬ್ಬರ ಬಂಧನ

ಯಲ್ಲಾಪುರ: ಕಾರಿನಲ್ಲಿ ಅಕ್ರಮವಾಗಿ ಸಾಗವಾನಿ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಆನಗೋಡ ಅರಣ್ಯ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಹುಟುಕಮನೆಯ ಅಕ್ಷಯ ಮಾದೇವ ಮರಾಠಿ ಹಾಗೂ ಸುಬ್ರಹ್ಮಣ್ಯ ಬಾಬು ಸಿದ್ದಿ ಬಂಧಿತರು. ಅವರು ಅನಗೋಡ ಸಮೀಪದ ದೋಣಿಗದ್ದೆ ಕಾಯ್ದಿಟ್ಟ ಅರಣ್ಯದಲ್ಲಿ ಹಸಿ ಸಾಗವಾನಿ ಕಟ್ಟಿಗೆಗಳನ್ನು ಕಡಿದು, ಕಾರಿನಲ್ಲಿ ಸಾಗಿಸುತ್ತಿದ್ದರು.

ಆ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.  ಇವರಿಂದ 2.50 ಲಕ್ಷ ರೂ ಮೌಲ್ಯದ ಸಾಗವಾನಿ ತುಂಡುಗಳನ್ನು ಹಾಗೂ ಸಾಗಿಸುತ್ತಿದ್ದ
ಕಾರನ್ನು ವಶಪಡಿಸಿಕೊಂಡಿದ್ದಾರೆ.

ಡಿಸಿಎಫ್ ಎಸ್. ಜಿ ಹೆಗಡೆ,ಎಸಿಎಫ್ ಆನಂದ ಎಚ್,ಆರ್‌ಎಫ್‌ಒ ಎನ್.ಎಲ್ ನದಾಫ, ಡಿ.ಆರ್‌.ಎಸ್‌.ಒಗಳಾದ ಶಿವಾನಂದ ಕಡಹಟ್ಟಿ, ಶ್ರೀನಿವಾಸ ನಾಯ್ಕ, ಬಸಲಿಂಗಪ್ಪ ಬಸಪ್ಪ,ಅಶೋಕ ಶಿರಗಾವಿ, ಸುನಿಲ್ ಜಂಗಮಶೆಟ್ಟಿ,ಅಲ್ತಾಫಚೌಕಡಾಕ್ ಆಶೋಕಹಳ್ಳಿ, ಸಂಜಯ ಬೋರಗಲ್ಲಿ, ನಾಗರಾಜ ಕಲಗುಟಕ‌ರ್, ಸಂತೋಷ ಕರಚಕಟ್ಟಿ ಇತರರು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

7 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

7 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

21 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago