ಕರ್ನಾಟಕಕ್ಕೆ 4ನೇ ಶ್ರೇಣಿ ಪಡೆದು ಎನ್ .ಗಾಯತ್ರಿ ರವರು ಕರ್ನಾಟಕ ಉಚ್ಚ ನ್ಯಾಯಾಲಯ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ತಳವರ್ಗ ಕಡು ಬಡತನದ ಹಿನ್ನಲೆಯಿಂದ ಬಂದ ಎನ್. ಗಾಯತ್ರಿ ರವರು ಆಯ್ಕೆಯಾಗಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾರಹಳ್ಳಿ ಗ್ರಾಮದ ಎನ್. ಗಾಯತ್ರಿ ರವರು 2021ರಲ್ಲಿ ತಮ್ಮ ಕಾನೂನು ಪದವಿ ಪಡೆದು ತಾವು ಕಂಡ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅತ್ಯಂತ ತಳಸಮುದಾಯ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಎನ್. ಗಾಯತ್ರಿ ರವರು ಬಂಗಾರಪೇಟೆ ತಾಲ್ಲೂಕಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದು ನಂತರ ಕೆ.ಜಿ.ಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯನ್ನು ಕರ್ನಾಟಕಕ್ಕೆ 4ನೇ ಸ್ಥಾನ ಪಡೆದುಕೊಂಡಿದ್ದಾರೆ.
ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ ಅವರ ಏಕೈಕ ಪುತ್ರಿ ಮೂವರು ಸಹೋದರರಿದ್ದಾರೆ. ತೀರಾ ಬಡತನದಲ್ಲಿ ಬೆಳೆದ ಗಾಯತ್ರಿ ಮೊದಲಿನಿಂದಲೂ ಸಾಮಾಜಿಕ ಕಾಳಜಿ, ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು. ಇದೀಗ ಯಶಸ್ವಿಯಾಗಿದ್ದು, ತಂದೆ, ತಾಯಿ, ಸಹಪಾಠಿಗಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವ ಗಾಯತ್ರಿ ಅವರು, “ಎರಡನೇ ಪ್ರಯತ್ನದಲ್ಲಿ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದು ತುಂಬಾ ಸಂತಸ ತಂದಿದೆ ನನಗಿಂತ ನಮ್ಮ ಕುಟುಂಬಸ್ಥರು ಹೆಚ್ಚು ಖುಷಿಯಾಗಿದ್ದಾರೆ ಎಂದು ಸಂತಸ ಹಂಚಿಕೊಂಡರು.
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಸ್ಫೂರ್ತಿ.
“ನಮ್ಮಮನೆಯಲ್ಲಿ ಉನ್ನತ ಶಿಕ್ಷಣ ಪಡೆದ ಮೊದಲ ಮಹಿಳೆ ನಾನು, ಸರ್ಕಾರಿ ನೌಕರಿ ಪಡೆದುಕೊಂಡದ್ದು, ಅದರಲ್ಲೂ ಸಿವಿಲ್ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವುದರಲ್ಲಿ ಮೊದಲಿಗಳು. ತಳ ಸಮುದಾಯಗಳ ತಲ್ಲಣಗಳಿಗೆ ಮಿಡಿಯಲು ಪ್ರಯತ್ನಿಸುತ್ತೇನೆ. ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನನ್ನ ಮಿತಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ. ನನ್ನೆಲ್ಲ ಸಾಧನೆಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸ್ಫೂರ್ತಿಯಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವೆ” ಎಂದು ಹೇಳಿದರು.
ವರದಿ – ರೋಶನ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…