Latest

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ

ಬೆಂಗಳೂರು ಜನಪ್ರತಿನಿಧಿ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಇದೀಗ ಅವರಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಶೆಟ್ಟಿಯವರ ಜೊತೆಗೆ ಈ ಪ್ರಕರಣದಲ್ಲಿ ಆರೋಪಿವಾಗಿದ್ದ ಮೂವರು ಸಹ ದೋಷಿಗಳೆಂದು ತೀರ್ಪು ಪ್ರಕಟವಾಗಿದೆ.

ನ್ಯಾಯಾಲಯದ ತೀರ್ಪು ಮತ್ತು ಮೇಲ್ಮನವಿ ಅವಕಾಶ

ತೀರ್ಪಿನ ಅನ್ವಯ, ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ, ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಧಿಯನ್ನು ನ್ಯಾಯಾಲಯ ನೀಡಿದೆ.

ಪ್ರಕರಣದ ಹಿನ್ನೆಲೆ

ಮಾಜಿ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಮತ್ತು ಮುನಿರಾಜು ಎಂಬುವವರು ಖಾಸಗಿ ಬ್ಯಾಂಕೊಂದರಿಂದ ನಕಲಿ ದಾಖಲೆಗಳನ್ನು ಬಳಸಿ ಕೋಟ್ಯಾಂತರ ರೂ. ಸಾಲ ಪಡೆದಿದ್ದರು. 2012ರಲ್ಲಿ ಈ ವಂಚನೆಯ ಪ್ರಕರಣ ನಡೆದಿದೆ. ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿದ್ದು, ಆರೋಪಿ ವರ್ಗದ ವಿರುದ್ಧ ಪೂರಕ ಸಾಬೀತುಗಳನ್ನು ಪತ್ತೆಹಚ್ಚಿತ್ತು.

ಸಾಲ ವಂಚನೆ: ಆರೋಪ ಸಾಬೀತು

ನಕಲಿ ದಾಖಲೆಗಳ ಆಧಾರದ ಮೇಲೆ ಕೋಟ್ಯಾಂತರ ಸಾಲ ಪಡೆದು ವಂಚನೆ ನಡೆಸಿದ ಆರೋಪ ಇದೀಗ ಸಾಬೀತಾಗಿದೆ. ನ್ಯಾಯಾಲಯದ ತೀರ್ಪು ಹೊರಬಿದ್ದಿರುವ ಹಿನ್ನೆಲೆಯಲ್ಲಿ ಕೃಷ್ಣಯ್ಯ ಶೆಟ್ಟಿ ಹಾಗೂ ಇತರ ಆರೋಪಿಗಳು ಮುಂದಿನ ಹಂತದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಈ ತೀರ್ಪಿನೊಂದಿಗೆ ರಾಜ್ಯ ರಾಜಕೀಯ ವಲಯದಲ್ಲಿಯೂ ಚರ್ಚೆ ಆರಂಭವಾಗಿದ್ದು, ರಾಜಕೀಯ ನಾಯಕರು ಮತ್ತು ಸಾರ್ವಜನಿಕರು ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

40 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago