Latest

ತಾರಿಹಾಳದಲ್ಲಿ ದಾರಿಗೆ ಎಳೆದ ಬಾಣಂತಿ ಕುಟುಂಬ: ಖಾಸಗಿ ಫೈನಾನ್ಸ್‌ ಸಿಬ್ಬಂದಿಯಿಂದ ಮನೆಗೆ ಬೀಗ

ಬೆಳಗಾವಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ಗುರುವಾರ ಖಾಸಗಿ ಫೈನಾನ್ಸ್ ಸಿಬ್ಬಂದಿ, ಮನೆ ಸಾಲ ವಸೂಲಿಗಾಗಿ, ಒಂದು ತಿಂಗಳ ಹಸುಗೂಸು ಮತ್ತು ಬಾಣಂತಿ ಮಹಿಳೆ ಸೇರಿ ಇಡೀ ಕುಟುಂಬವನ್ನು ಮನೆಗಳಿಂದ ಹೊರಹಾಕಿ, ಅವರ ಮನೆಗೆ ಬೀಗ ಜಡಿದರು. ಮನೆ ಎದುರು “ಈ ಮನೆ ಹರಾಜಿಗೆ” ಎಂದು ಬರೆದು ಹೂಡಿಕೆದಾರರಿಗೆ ಘೋಷಣೆ ಮಾಡಲಾಯಿತು.

ಗಣಪತಿ ರಾಮಚಂದ್ರ ಲೋಹಾರ್ ಅವರು ಐದು ವರ್ಷಗಳ ಹಿಂದೆ ಮನೆ ನಿರ್ಮಾಣಕ್ಕಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ₹5 ಲಕ್ಷ ಸಾಲ ಪಡೆದಿದ್ದರು. ಮೂರು ವರ್ಷಗಳ ಕಾಲ ಸಾಲದ ಕಂತುಗಳನ್ನು ನಿರಂತರವಾಗಿ ಪಾವತಿಸಿದ್ದ ಅವರು, ತಾಯಿಯ ಅನಾರೋಗ್ಯ ಮತ್ತು ಮಗಳ ಹೆರಿಗೆ ಸಂಬಂಧಿಸಿದ ಆರ್ಥಿಕ ತೊಂದರೆಗಳಿಂದಾಗಿ ಕಳೆದ ಆರು ತಿಂಗಳಿನಿಂದ ಕಂತು ಪಾವತಿಸಲು ವಿಫಲರಾದರು.

ಫೈನಾನ್ಸ್ ಸಂಸ್ಥೆಯವರು ನ್ಯಾಯಾಲಯದ ಮೊರೆ ಹೋದ ನಂತರ, ನ್ಯಾಯಾಲಯದ ಆದೇಶದಂತೆ, ಪೊಲೀಸರು ಮತ್ತು ವಕೀಲರ ಸಮ್ಮುಖದಲ್ಲಿ ಲೋಹಾರ್ ಅವರ ಮನೆಯಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದರು. ಮನೆಯಲ್ಲಿದ್ದ ಹಸಿ ಬಾಣಂತಿ, ಹಸುಳೆ, ಹಾಗೂ ವೃದ್ಧೆ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರನ್ನು ಮನೆಯಿಂದ ಹೊರಹಾಕಿ, ಅವರ ಸಾಮಾನುಗಳನ್ನು ಹೊರಗೆ ಎಸೆದು ಬೀಗ ಹಾಕಲಾಯಿತು.

ಕನಿಷ್ಠ ಮಾನವೀಯತೆ ತೋರದೆ ನಡೆದ ಈ ಘಟನೆ, ಬಾಣಂತಿ ಹಾಗೂ ಕುಟುಂಬದ ಇತರರನ್ನು ಬೀದಿಪಾಲು ಮಾಡಿದೆ. ಇಡೀ ದಿನ ಉಪವಾಸದಲ್ಲಿದ್ದ ಕುಟುಂಬದವರು, ಮನೆಯ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದು ಬಿಸಿಲಿನಿಂದ ತಾಳುವಂತೆ ಮಾಡಲಾಯಿತು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆಗೊಂಡಿದ್ದ ಬಾಣಂತಿ ತೀವ್ರ ಆಘಾತ ಅನುಭವಿಸಿದ್ದಾರೆ.

ಈ ಘಟನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ನಡೆದಿದ್ದು, ಸ್ಥಳೀಯ ನಾಗರಿಕರು ಹಾಗೂ ಸಾಮಾಜಿಕ ಸಂಘಟನೆಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago