Latest

ಸಮಾಜ ಕಲ್ಯಾಣ ಇಲಾಖೆ ಗುಮಾಸ್ತೆಯ ಬರ್ಬರ ಹತ್ಯೆ; ಅನೈತಿಕ ಸಂಬಂದದಿಂದ ಜೀವಕ್ಕೆ ಆಪತ್ತು ಬಂತಾ?

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎಂಬುವವರನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಇಂದು ನಡೆದಿದೆ.

ಮೃತ ಮಹಿಳೆ ರೇಣಿಕಾ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿ ಏಕಾಏಕಿ ದಾಳಿ ಮಾಡಿದ್ದಾನೆ.
ಇಂಡಿ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದ ರೇಣುಕಾ ಕನ್ನೊಳ್ಳಿ, ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಏಕಾಏಕಿ ದಾಳಿ ಮಾಡಿದ್ದಾನೆ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ರೇಣುಕಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪಿದ್ದಾರೆ.

ಅನೈತಿಕ ಸಂಬಂಧ ಹೊಂದಿದ್ದ ಹಿನ್ನಲೆ, ರೇಣುಕಾಳ ಹತ್ಯಗೆ ಕಾರಣ ಎಂದು ತಿಳಿದು ಬಂದಿದ್ದು
ಸಂಜು ಬನಸೋಡೆ ಎಂಬಾತ ಹತ್ಯೆ ಮಾಡಿದ್ದಾನೆ. ಸದ್ಯ ಆರೋಪಿ ಸಂಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಾಥಮಿಕ ಹಂತದಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬಳಿಕಷ್ಟೇ ಕೊಲೆಗೆ ಕಾರಣ ಏನು ಎಂಬುದು ಬಹಿರಂಗವಾಗಬೇಕಿದೆ. ಇಂಡಿ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.  ವರದಿ: ದವಲಸಾಬ ಬನ್ನೇಟ್ಟಿ

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

2 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

15 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago