ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎಂಬುವವರನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಇಂದು ನಡೆದಿದೆ.
ಮೃತ ಮಹಿಳೆ ರೇಣಿಕಾ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿ ಏಕಾಏಕಿ ದಾಳಿ ಮಾಡಿದ್ದಾನೆ.
ಇಂಡಿ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದ ರೇಣುಕಾ ಕನ್ನೊಳ್ಳಿ, ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಏಕಾಏಕಿ ದಾಳಿ ಮಾಡಿದ್ದಾನೆ. ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ರೇಣುಕಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪಿದ್ದಾರೆ.
ಅನೈತಿಕ ಸಂಬಂಧ ಹೊಂದಿದ್ದ ಹಿನ್ನಲೆ, ರೇಣುಕಾಳ ಹತ್ಯಗೆ ಕಾರಣ ಎಂದು ತಿಳಿದು ಬಂದಿದ್ದು
ಸಂಜು ಬನಸೋಡೆ ಎಂಬಾತ ಹತ್ಯೆ ಮಾಡಿದ್ದಾನೆ. ಸದ್ಯ ಆರೋಪಿ ಸಂಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಾಥಮಿಕ ಹಂತದಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬಳಿಕಷ್ಟೇ ಕೊಲೆಗೆ ಕಾರಣ ಏನು ಎಂಬುದು ಬಹಿರಂಗವಾಗಬೇಕಿದೆ. ಇಂಡಿ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ವರದಿ: ದವಲಸಾಬ ಬನ್ನೇಟ್ಟಿ
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…