ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬೋಟ್ ದುರಂತ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಜಬಲ್ಪುರದ ನರ್ಮದಾ ನದಿಯ ಮೇಲೆ ನಿರ್ಮಿಸಲಾದ ಬಾರ್ಗಿ ಅಣೆಕಟ್ಟೆಯಲ್ಲಿ ಏಪ್ರಿಲ್ 30ರಂದು ಸಂಜೆ ಈ ದುರಂತ ಸಂಭವಿಸಿತು. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ 41 ಜನರಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ನಾಪತ್ತೆಯಾಗಿದ್ದಾರೆ. ಉಳಿದ 28 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದ ಅನೇಕ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವಿಶೇಷವಾಗಿ ತಾಯಿ ಮತ್ತು ಮಗು ಒಬ್ಬರನ್ನೊಬ್ಬರು ಬಿಗಿಯಾಗಿ ಅಪ್ಪಿಕೊಂಡ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾದ ಒಂದು ಚಿತ್ರ ಜನರ ಮನವನ್ನು ಕಲುಕಿತ್ತು.
ಆದರೆ, ಈ ಚಿತ್ರ ಕುರಿತು ಈಗ ಮಹತ್ವದ ಸತ್ಯ ಬಹಿರಂಗವಾಗಿದೆ. ಜಬಲ್ಪುರ ಜಿಲ್ಲಾಧಿಕಾರಿಗಳ ಅಧಿಕೃತ ಎಕ್ಸ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದ್ದು, ವೈರಲ್ ಆಗಿರುವ ಆ ಚಿತ್ರ ನಿಜವಲ್ಲ. ಅದು ಕೃತಕ ಬುದ್ಧಿಮತ್ತೆ (AI) ಮೂಲಕ ಸೃಷ್ಟಿಸಲಾದ ಚಿತ್ರವಾಗಿದ್ದು, ದುರಂತದ ನೈಜ ದೃಶ್ಯವಲ್ಲ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಮಾಹಿತಿಯನ್ನು ನಂಬುವ ಮೊದಲು ಅದರ ನಿಜಾಸ್ತಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…