ಶಂಭುಖನಗರ ಗ್ರಾಮದಲ್ಲಿ ಕಳೆದ 4 ದಿನಗಳಿಂದ ನೀರಿಲ್ಲದೆ ಜನಜೀವನ ಅಸ್ತವ್ಯಸ್ತವಾಗಿದೆ, ಇಷ್ಟಾದರೂ ಈ ಬಗ್ಗೆ ಯಾವುದೇ ಅಧಿಕಾರಿಗಳು, ತಲೆ ಕೆಡಿಸಿಕೊಳ್ಳುತ್ತಿಲ್ಲ, ನಮ್ಮ ಗೋಳು ಕೇಳುವರು ಯಾರು ಎಂದು ಗ್ರಾಮಸ್ಥರು ಸಸಂಭಂದ ಪಟ್ಟ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.
ಹೌದು ವೀಕ್ಷಕರೇ ಇದೇ ಗೌರಿಬಿದನೂರು ತಾಲೂಕಿಗೆ ಸೇರಿದ ಇಡಗೂರು ಗ್ರಾಮ ಪಂಚಾಯತಿಗೆ ಶಂಭುಖ ನಗರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೆ ಜನರ ಪರದಾಟ ಆಂಧ್ರಪ್ರದೇಶದ ಚೌಳೂರಿನಿಂದ ಬರುವಂತಹ ಟ್ಯಾಂಕರ್ ನಲ್ಲಿ ಒಂದು ಬಿಂದಿಗೆಗೆ 15 ರೂಗಳಂತೆ ಖರೀದಿಸಿ ಗ್ರಾಮಸ್ಥರು ನೀರು ಕುಡಿಯುವ ಹಾಗಾಗಿದೆ, ಮತ್ತು ಚರಂಡಿ ಸ್ವಚ್ಛತೆ ಮಾಡಿ ಸುಮಾರು ಎರಡು ಮೂರು ವರ್ಷ ಆಗಿದೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ ಮತ್ತು ವಾರ್ಡ್ ನ ಸದಸ್ಯ ಕೂಡ ಇದರ ಬಗ್ಗೆ ಯಾವುದೇ ರೀತಿಯ ಕ್ರಮ ವಹಿಸಿಲ್ಲ, ಎಂದು ಬೇಕೇ ಬೇಕು ನೀರು ಬೇಕು ಎಂದು ಘೋಷಣೆ ಗಳನ್ನು ಕೂಗಿ ಶಂಭುಖ ನಗರದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್ ಮಾಡಿ ನೀರಿನ ಬಗ್ಗೆ ಮಾಹಿತಿ ತಿಳಿಸಿದರೆ ನಾನು ರಜೆಯಲ್ಲಿದ್ದೀನಿ, ಇದೀನಿ ನನಗೆ ಹುಷಾರಿಲ್ಲ ಎಂದು ಹೇಳುತ್ತಾರೆ, ಶಂಭುನಗರ ಜನತೆಗೆ ನೀರು ಕೊಡುವುದು ಯಾರು ಮತ್ತು ಚರಂಡಿ ಕ್ಲೀನಿಂಗ್ ಆಗುವುದು ಯಾವಾಗ? ಇಡುಗೂರು ಗ್ರಾಮ ಪಂಚಾಯತಿ ಅಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಕ್ರಮ ವಹಿಸದೆ ಇದ್ದಲ್ಲಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವರದಿ:ಅವಿನಾಶ್
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…