Latest

ಗೌರಿಬಿದನೂರು ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯ ಶಂಭುಖ ನಗರ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿವೆ .

ಶಂಭುಖನಗರ ಗ್ರಾಮದಲ್ಲಿ ಕಳೆದ 4 ದಿನಗಳಿಂದ ನೀರಿಲ್ಲದೆ ಜನಜೀವನ ಅಸ್ತವ್ಯಸ್ತವಾಗಿದೆ, ಇಷ್ಟಾದರೂ ಈ ಬಗ್ಗೆ ಯಾವುದೇ ಅಧಿಕಾರಿಗಳು, ತಲೆ ಕೆಡಿಸಿಕೊಳ್ಳುತ್ತಿಲ್ಲ, ನಮ್ಮ ಗೋಳು ಕೇಳುವರು ಯಾರು ಎಂದು ಗ್ರಾಮಸ್ಥರು ಸಸಂಭಂದ ಪಟ್ಟ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.
ಹೌದು ವೀಕ್ಷಕರೇ ಇದೇ ಗೌರಿಬಿದನೂರು ತಾಲೂಕಿಗೆ ಸೇರಿದ ಇಡಗೂರು ಗ್ರಾಮ ಪಂಚಾಯತಿಗೆ ಶಂಭುಖ ನಗರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೆ ಜನರ ಪರದಾಟ ಆಂಧ್ರಪ್ರದೇಶದ ಚೌಳೂರಿನಿಂದ ಬರುವಂತಹ ಟ್ಯಾಂಕರ್ ನಲ್ಲಿ ಒಂದು ಬಿಂದಿಗೆಗೆ 15 ರೂಗಳಂತೆ ಖರೀದಿಸಿ ಗ್ರಾಮಸ್ಥರು ನೀರು ಕುಡಿಯುವ ಹಾಗಾಗಿದೆ, ಮತ್ತು ಚರಂಡಿ ಸ್ವಚ್ಛತೆ ಮಾಡಿ ಸುಮಾರು ಎರಡು ಮೂರು ವರ್ಷ ಆಗಿದೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ ಮತ್ತು ವಾರ್ಡ್ ನ ಸದಸ್ಯ ಕೂಡ ಇದರ ಬಗ್ಗೆ ಯಾವುದೇ ರೀತಿಯ ಕ್ರಮ ವಹಿಸಿಲ್ಲ, ಎಂದು ಬೇಕೇ ಬೇಕು ನೀರು ಬೇಕು ಎಂದು ಘೋಷಣೆ ಗಳನ್ನು ಕೂಗಿ ಶಂಭುಖ ನಗರದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್ ಮಾಡಿ ನೀರಿನ ಬಗ್ಗೆ ಮಾಹಿತಿ ತಿಳಿಸಿದರೆ ನಾನು ರಜೆಯಲ್ಲಿದ್ದೀನಿ, ಇದೀನಿ ನನಗೆ ಹುಷಾರಿಲ್ಲ ಎಂದು  ಹೇಳುತ್ತಾರೆ, ಶಂಭುನಗರ ಜನತೆಗೆ ನೀರು ಕೊಡುವುದು ಯಾರು ಮತ್ತು ಚರಂಡಿ ಕ್ಲೀನಿಂಗ್ ಆಗುವುದು ಯಾವಾಗ? ಇಡುಗೂರು ಗ್ರಾಮ ಪಂಚಾಯತಿ ಅಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಕ್ರಮ ವಹಿಸದೆ ಇದ್ದಲ್ಲಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  ವರದಿ:ಅವಿನಾಶ್ 

nazeer ahamad

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

4 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

10 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago