Latest

ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ: ಜಿಪಂ ಸಿಇಒ

ಕಾರವಾರ: ಪ್ರಸ್ತುತ ಬೇಸಿಗೆಗಾಲವಾದ್ದರಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳಿಗೆ ಶುದ್ದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುವುದನ್ನು ಖಾತರಿಪಡಿಸಿಕೊಂಡು ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ನೀರಿನ ಅಭಾವ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಟ್ಯಾಂಕ‌ರ್ ಮೂಲಕ ನೀರು ಒದಗಿಸಲಾಗುತ್ತಿದ್ದು, ಗ್ರಾಮ ಪಂಚಾಯತ್ ಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುವ ಮುನ್ನ ಪಿಡಿಓ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯ ಸಾಧಿಸಿ ಮಾಹಿತಿಯನ್ನು ಪಡೆದು ವರದಿ ಸಲ್ಲಿಸಬೇಕು. ಈ ವರದಿ ಆಧಾರದ ಮೇಲೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಕೆಲವು ಅಂಗನವಾಡಿ, ಶಾಲೆ ಹಾಗೂ ವಸತಿ ಶಾಲೆಗಳಿಗೆ ಸರ್ಮಪಕವಾಗಿ ಶುದ್ದ ಕುಡಿಯುವ ನೀರು ಪೂರೈಕೆಯಾಗದಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಕುರಿತಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕುಡಿಯುವ ನೀರು ಪೂರೈಕೆ ಮಾಡಬೇಕು ಹಾಗೂ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಚಗೊಳಿಸುವ ಕಾರ್ಯವನ್ನು ಮಾಡಬೇಕು ಎಂದ ಅವರು, ತಾಲೂಕು ಪಂಚಾಯತ್ ಇಒ ಹಾಗೂ ಪಿಡಿಒಗಳು ತಮ್ಮ ತಮ್ಮ ವ್ಯಾಪ್ತಿಯ ನೀರಿನ ಅಭಾವವಿರುವ ಸ್ಥಳಗಳ ಕ್ರೂಡಿಕೃತ ವರದಿಯನ್ನು ಸಲ್ಲಿಸಬೇಕು ಮತ್ತು ಅವಶ್ಯಕವಿರುವ ಹೊಸ ಬೋರ್‌ವೆಲ್‌ಗಳು, ಪೈಪ್ ಹಾಗೂ ರಿಚಾರ್ಚ್ ಪಿಟ್ ಗಳ ಬಗ್ಗೆ ಮಾಹಿತಿ ಒದಗಿಸುವಂತೆ ತಿಳಿಸಿದರು.
ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ನಿಯಮಿತವಾಗಿ ಸಭೆಗಳನ್ನು ಮಾಡಿ, ನಡವಳಿ ಸಹಿತ ಅನುಪಾಲನಾ ವರದಿಯನ್ನು ನೀಡಬೇಕು ಹಾಗೂ ಕುಡಿಯುವ ನೀರು ಪೂರೈಕೆಯ ಮೂಲದ ನೀರಿನ ಗುಣಮಟ್ಟ ಬಗ್ಗೆ ಎಫ್‌ಟಿಕೆ ಕಿಟ್ ಮೂಲಕ ಪರೀಕ್ಷಿಸುವುದರ ಜತೆ ನೀರಿನ ಮಾದರಿಯನ್ನು ಜೈವಿಕ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಬೇಕು.ನೀರಿನ ಮಾದರಿ ಸಂಗ್ರಹಿಸುವ ಸಿಬ್ಬಂದಿಗಳು ಆಯ್ಕೆ ಮಾಡಿದ ಪ್ರದೇಶದ ನೀರಿನ ಮಾದರಿಯ ಜೊತೆ ಇತರೆ ಪ್ರದೇಶದ ನೀರಿನ ಮಾದರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಬೇಕು ಎಂದರು.
ಈಗಾಗಲೇ ಕೊರೆಯಲಾದ ಬೊರ್‌ವೆಲ್‌ಗಳ ನೀರಿನ ಮಟ್ಟದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಿ ಮುಂಜಾಗೃತೆ ಕ್ರಮವಹಿಸಿ ಸಮರ್ಪಕ ನೀರನ್ನು ಪೂರೈಕೆ ಮಾಡುವುದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನೀಯರ್ ಎನ್.ಡಿ ರಘುನಾಥ ಮಾತನಾಡಿ ಬೇಸಿಗೆ ಕಾಲದಲ್ಲಿ, ಜನರಿಗೆ ನೀರಿನ ಮಿತ ಬಳಕೆಯ ಕುರಿತಂತೆ ಜಾಗೃತಿ ಮೂಡಿಸಬೇಕು ಇದಕ್ಕಾಗಿ ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ನಾಗೇಶ್ ರಾಯ್ಕರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಪ್ರಕಾಶ ಹಾಲಮ್ಮನವ‌ರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಶಂಕರ್ ರಾವ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ, ಮತ್ತಿತರರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

4 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

17 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

19 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago