
ವ್ಯಾಪಕ ಮಳೆ ಹಿನ್ನೆಲೆ ನಾಳೆ ಆಗಸ್ಟ್ 19ರಂದು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ವ್ಯಾಪಕ ಮಳೆ ಬೆಳಗಾವಿ ಜಿಲ್ಲೆಯ ಬೆಳಗಾವಿ, ಬೈಲಹೊಂಗಲ್, ಕಿತ್ತೂರು, ಖಾನಾಪುರ್, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹಾಗೂ ಹುಕ್ಕೇರಿ ತಾಲೂಕುಗಳಾದಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳು ಮತ್ತು ” ಬೆಳಗಾವಿ ಬೈಲ್ಹೊಂಗಲ್, ಕಿತ್ತೂರ್, ಖಾನಾಪುರ್, ರಾಮದುರ್ಗ ಹಾಗೂ ಸೌದತ್ತಿ ತಾಲೂಕುಗಳ ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 19 ರಂದು ರಜೆ ಘೋಷಿಸಿ ಆದೇಶಿಸಿದೆ. ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ, ಉಪ ನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜೆ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ವರದಿ: ಶಿವು ಕುಂಬಾರ
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392