Crime

ಮನೆಗೆ ಕರೆದುಕೊಂಡು ಹೋಗು ಎಂದ ಪ್ರೇಯಸಿಯ ಪ್ರಾಣ ತೆಗೆದ ಪ್ರಿಯತಮ!

ತೀರ್ಥಹಳ್ಳಿಯಲ್ಲಿ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಸೃಜನ್ ಆಗಾಗ​ ಕೊಪ್ಪಗೆ ಹಣ ವಸೂಲಿಗೆಂದು ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ಓದುತ್ತಿದ್ದ ಸೌಮ್ಯಾಳ ಪರಿಚಯವಾಗಿದೆ. ಈ ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿದೆ. ಆದರೆ ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದಾರೆ. ಇತ್ತ ಸೌಮ್ಯ ತಮ್ಮ ಪೋಷಕರ ಬಳಿ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಜುಲೈ 2 ರಂದು‌ ಹೊರಟಿದ್ದಾಳೆ. ಅಂತೆಯೇ ತೀರ್ಥಹಳ್ಳಿಗೆ ಬಂದ ಸೌಮ್ಯಾ ತನ್ನ ಪ್ರಿಯತಮನನ್ನು ಭೇಟಿಯಾಗಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ಒತ್ತಾಯಿಸಿದ್ದಾಳೆ. ಈ ವೇಳೆ ಸೃಜನ್‌, ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಮನವೊಲಿಸುವ ಪ್ರಯತ್ನ ಮಾಡಿದ್ದಾನೆ.
ಆದರೆ ಸೃಜನ್‌ ಮಾತನ್ನು ಕೇಳದ ಸೌಮ್ಯಾ ಮತ್ತೆ ಆತನನ್ನು ಪೀಡಿಸಿದ್ದಾಳೆ. ಹೀಗಾಗಿ ಸೃಜನ್‌ ಆಕೆಯನ್ನು ಸಮಾಧಾನಪಡಿಸಲೆಂದು ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದಿದ್ದಾನೆ. ತನ್ನನ್ನು ಸೃಜನ್‌ ಮದುವೆ ಆಗಲ್ಲವೆಂದು ಅನುಮಾನ ವ್ಯಕ್ತಪಡಿಸಿದ್ದಾಳೆ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರೊಚ್ಚಿಗೆದ್ದ ಸೃಜನ್‌, ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಹಿಸುಕಿದ್ದು, ಪರಿಣಾಮ ಆಕೆ ಸ್ಥಳದಲ್ಲೇ ಅಸುನೀಗಿದ್ದಾಳೆ. ಇನ್ನು ಸೌಮ್ಯಾ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡ ಸೃಜನ್‌ ಗಾಬರಿಯಾಗಿದ್ದಾನೆ. ಅಲ್ಲದೇ ಕೂಡಲೇ ಶವವನ್ನು ಮುಂಬಾಳು ಬಳಿ ಹೂತಿಟ್ಟಿದ್ದಾನೆ. ಇತ್ತ ತೀರ್ಥಹಳ್ಳಿಗೆ ಹೋದ ಸೌಮ್ಯಾ ವಾಪಸ್‌ ಬರದೇ ಇರುವುದರಿಂದ ಆಕೆಯ ಪೋಷಕರು ಆತಂಕಗೊಂಡು ಕೊಪ್ಪ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದಾರೆ. ಈ ವೇಳೆ ಸೃಜನ್‌ ಬಣ್ಣ ಬಯಲಾಗಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago