Latest

ಬೆಂಗಳೂರು: ಲಂಚ ಪಡೆಯುವ ವೇಳೆ ಕೆಐಎಡಿಬಿ ಅಧಿಕಾರಿ ಲೋಕಾಯುಕ್ತ ಬಲೆಗೆ.

ಬೆಂಗಳೂರು ನಗರದಲ್ಲಿ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಬೆಳವಣಿಗೆ ಕಂಡಿದೆ. ಕೆಐಎಡಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ವೆ ಮೇಲ್ವಿಚಾರಕ (ಸೂಪರ್ ವೈಸರ್) ನರೇಂದ್ರ ಕುಮಾರ್, ಅನುಮೋದನೆಗಾಗಿ 1.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರ ಜಾಲಕ್ಕೆ ಬಿದ್ದು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ರವಿ ಎಂಬ ವ್ಯಕ್ತಿ, ಬೆಂಗಳೂರು ಪ್ರದೇಶದ ಕೆಐಎಡಿಬಿಗೆ ತನ್ನ ಸ್ಕೆಚ್ ಸಲ್ಲಿಸಿದ್ದರು. ಅರ್ಜಿಗೆ ಅನುಮೋದನೆ ನೀಡುವ ಬಗ್ಗೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ, ನರೇಂದ್ರ ಕುಮಾರ್ 1.50 ಲಕ್ಷ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಲಂಚದ ಒತ್ತಡಕ್ಕೆ ಗುರಿಯಾದ ರವಿ, ತಕ್ಷಣವೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.

ಈ ದೂರಿನ ಹಿನ್ನೆಲೆಯಲ್ಲಿ, ಲೋಕಾಯುಕ್ತ ಎಸ್‌ಪಿ ಡಾ. ವಂಶಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಪಿಐ ಅನೀಲ್ ಕುಮಾರ್, ಪ್ರಶಾಂತ್ ಹಾಗೂ ಅಂಜನ್ ಕುಮಾರ್ ನೇತೃತ್ವದ ವಿಶೇಷ ತಂಡದ ಪೊಲೀಸರು ನಿಗದಿತ ಸಮಯದಲ್ಲಿ ದಾಳಿ ನಡೆಸಿ, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ನರೇಂದ್ರ ಕುಮಾರ್ ಅವರನ್ನು ಬಲೆಗೆಳ್ಳಿದರು.

ಪ್ರಸ್ತುತ ಆರೋಪಿಯನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಹಂತದ ತನಿಖೆ ಮುಂದುವರೆಸಿದ್ದಾರೆ. ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

4 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago