ಬೆಂಗಳೂರು: ಮಾಲೀಕನ ಮನೆಯಿಂದ ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳವಿಗೆ ಎಳೆಯುತ್ತಿದ್ದ ಮನೆಕೆಲಸದಾಕೆಯನ್ನು ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾಗಿರುವ ಉಮಾ (43) ಎಂಬ ಮಹಿಳೆ, ರೂ. 67 ಲಕ್ಷ ನಗದು ಹಾಗೂ ಚಿನ್ನಾಭರಣ ಸೇರಿ ಒಟ್ಟು 1 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಕದಿಯುತ್ತಿದ್ದಳು.
ಚಾಮರಾಜಪೇಟೆಯ ನಿವಾಸಿಯಾಗಿರುವ ಉದ್ಯಮಿ ರಾಧಾ ಎಂಬವರು ತನ್ನ ನಿವಾಸದಲ್ಲಿ ಉಮಾಳನ್ನು ತಿಂಗಳಿಗೆ ರೂ. 23,000 ವೇತನದ ಮೇರೆಗೆ ಕೆಲಸಕ್ಕೆ ನೇಮಿಸಿದ್ದರು. ರಾಧಾ ಅವರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನೆ ಕೆಲಸಕ್ಕಾಗಿ ಉಮಾಳ ಸಹಾಯ ಬೇಕಾಗಿತ್ತು.
ಆದರೆ ಜೂನ್ 4ರಂದು ಬೆಳಿಗ್ಗೆ ಉಮಾ ಕೈಯಲ್ಲಿ ಬ್ಯಾಗ್ ಹಿಡಿದು ಹೊರಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿತ್ತು. ತಕ್ಷಣ ಅನುಮಾನಗೊಂಡ ರಾಧಾ ತಮ್ಮ ಬೀರನ್ನು ಪರಿಶೀಲಿಸಿದಾಗ, ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ರಾಧಾ ನೀಡಿದ ದೂರಿನ ಮೇರೆಗೆ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ನಡೆಸಿ ಉಮಾವನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಕಳವು ಎಸಗಿರುವುದಾಗಿ ಆರೋಪಿಯು ಸ್ವೀಕರಿಸಿದ್ದಾಳೆ.
ಈ ಹಿಂದೆ ಕೂಡ ಉಮಾ ಇನ್ನೊಂದು ಮನೆಯಲ್ಲಿಯೂ ದುಶ್ಚಟದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಂಡಿದ್ದ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈಗಾಗಲೇ ಉಮಾಳಿಂದ ಭಾಗಶಃ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…