Categories: CrimeLatest

ಸ್ನೇಹದ ನಂಬಿಕೆಗೆ ದ್ರೋಹ: ಸ್ನೇಹಿತನ ಪತ್ನಿಯೊಂದಿಗೆ ಪರಾರಿಯಾದ ವಿವಾಹಿತ, ಮಂಡ್ಯದಲ್ಲಿ ಸಂಚಲನ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಕುಟುಂಬಗಳನ್ನು ಬೆಚ್ಚಿಬೀಳಿಸುವ ಘಟನೆೊಂದು ಬೆಳಕಿಗೆ ಬಂದಿದೆ. ಸ್ನೇಹದ ಹೆಸರಿನಲ್ಲಿ ಮನೆಗೆ ಆಗಾಗ್ಗೆ ಬರುತ್ತಿದ್ದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಪತ್ನಿಯೊಂದಿಗೆ ಪರಾರಿಯಾಗಿರುವ ಪ್ರಕರಣ ಇದೀಗ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ಪರಾರಿಯಾದವರನ್ನು ಪವಿತ್ರ ಮತ್ತು ಯೇಸುದಾಸ್ ಎಂದು ಗುರುತಿಸಲಾಗಿದೆ. ಇಬ್ಬರೂ ಈಗಾಗಲೇ ವಿವಾಹಿತರಾಗಿದ್ದು, ತಲಾ ಇಬ್ಬರು ಮಕ್ಕಳಿದ್ದಾರೆ ಎಂಬುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆಯನ್ನು ತಂದಿದೆ. ತಮ್ಮ ತಮ್ಮ ಕುಟುಂಬ ಹಾಗೂ ಮಕ್ಕಳನ್ನು ಬಿಟ್ಟು ಇಬ್ಬರೂ ಮನೆ ತೊರೆದಿರುವುದು ಕುಟುಂಬಸ್ಥರಿಗೆ ಭಾರೀ ಆಘಾತ ಉಂಟುಮಾಡಿದೆ.

ಮನೆ ಬಿಟ್ಟು ಹೋದ ನಂತರ ಪವಿತ್ರ ಮತ್ತು ಯೇಸುದಾಸ್ ರಹಸ್ಯವಾಗಿ ಮದುವೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯಾದ ಬಳಿಕ ತಮ್ಮ ಮದುವೆ ಫೋಟೋಗಳನ್ನು ಕುಟುಂಬಸ್ಥರ ಮೊಬೈಲ್‌ಗಳಿಗೆ ಕಳುಹಿಸಿ ಮತ್ತಷ್ಟು ಶಾಕ್ ನೀಡಿದ್ದಾರೆ. ಈ ಬೆಳವಣಿಗೆಯಿಂದ ಎರಡೂ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಮನೆಯವರು ಕಂಗಾಲಾಗಿದ್ದಾರೆ.

ಒಂದೆಡೆ ಪತ್ನಿಯನ್ನು ಕಳೆದುಕೊಂಡ ಗಂಡ, ಮತ್ತೊಂದೆಡೆ ಗಂಡನಿಂದ ದೂರವಾದ ಹೆಂಡತಿ ತಮ್ಮ ಮಕ್ಕಳೊಂದಿಗೆ ದುಃಖದಲ್ಲಿದ್ದಾರೆ. ಮಕ್ಕಳ ಭವಿಷ್ಯವನ್ನು ನೆನೆದು ಕಣ್ಣೀರಿಡುತ್ತಿರುವ ಕುಟುಂಬಸ್ಥರು, ಮಕ್ಕಳ ಮುಖ ನೋಡಿದರೂ ಮರಳಿ ಮನೆಗೆ ಬನ್ನಿ ಎಂದು ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 hour ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago