Latest

ಮನೆಕಳವು ಪ್ರಕರಣ: ಆರೋಪಿಯ ಬಂಧನ, ₹1.12 ಲಕ್ಷ ಮೌಲ್ಯದ ವಸ್ತುಗಳು ವಶ

ಭದ್ರಾವತಿ: ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿ, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ವ್ಯಕ್ತಿಯನ್ನು ಭದ್ರಾವತಿಯ ಮೀನುಗಾರರ ಬೀದಿಯ ನಿವಾಸಿ ಜೈಕಾಂತ್ ಪಿ. (21) ಎಂದು ಗುರುತಿಸಲಾಗಿದೆ.

ಮೇ 2ರ ರಾತ್ರಿ, ಬಿ.ಎಚ್. ರಸ್ತೆ ಬಳಿ ಇರುವ ಮೀನುಗಾರರ ಬೀದಿಯ ಮನೆಯಲ್ಲಿ ಸಿಮೆಂಟ್ ಶೀಟ್ ಒಡೆದು ಒಳ ಪ್ರವೇಶಿಸಿದ ಕಳ್ಳರು, ಸುಮಾರು ₹1.12 ಲಕ್ಷ ಮೌಲ್ಯದ ಬಂಗಾರದ ಆಭರಣಗಳು, ನಗದು ಹಾಗೂ ಗಡಿಯಾರವನ್ನು ಕಳವು ಮಾಡಿದ್ದರು. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗೆ ಜಿಲ್ಲಾ ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್, ಹೆಚ್ಚುವರಿ ಎಸ್‌ಪಿಗಳು ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ.ಜಿ. ಕಾರಿಯಪ್ಪ ಅವರು ಮಾರ್ಗದರ್ಶನ ನೀಡಿದರು. ನಗರ ಉಪ ವಿಭಾಗದ ಡಿವೈಎಸ್‌ಪಿ ಕೆ.ಆರ್. ನಾಗರಾಜ್ ಹಾಗೂ ಸಿಪಿಐ ಶ್ರೀಶೈಲ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಠಾಣೆಯ ಪಿಎಸ್‌ಐ ಟಿ. ರಮೇಶ್ ನೇತೃತ್ವದಲ್ಲಿ ಎಎಸ್‌ಐ ಟಿ.ಪಿ. ಮಂಜಪ್ಪ, ಸಿ.ಎಚ್.ಸಿ. ನವೀನ್ ಮತ್ತು ಸಿಪಿಸಿ ನಾಗರಾಜ್ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ತಪಾಸಣೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಅವನಿಂದ ಕಳವಾದ ಆಭರಣಗಳು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಇನ್ನಷ್ಟು ಮಾಹಿತಿ ಸಂಗ್ರಹಿಸಲು ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

4 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago