ಭದ್ರಾವತಿ: ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿ, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಾವತಿಯ ಮೀನುಗಾರರ ಬೀದಿಯ ನಿವಾಸಿ ಜೈಕಾಂತ್ ಪಿ. (21) ಎಂದು ಗುರುತಿಸಲಾಗಿದೆ.
ಮೇ 2ರ ರಾತ್ರಿ, ಬಿ.ಎಚ್. ರಸ್ತೆ ಬಳಿ ಇರುವ ಮೀನುಗಾರರ ಬೀದಿಯ ಮನೆಯಲ್ಲಿ ಸಿಮೆಂಟ್ ಶೀಟ್ ಒಡೆದು ಒಳ ಪ್ರವೇಶಿಸಿದ ಕಳ್ಳರು, ಸುಮಾರು ₹1.12 ಲಕ್ಷ ಮೌಲ್ಯದ ಬಂಗಾರದ ಆಭರಣಗಳು, ನಗದು ಹಾಗೂ ಗಡಿಯಾರವನ್ನು ಕಳವು ಮಾಡಿದ್ದರು. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗೆ ಜಿಲ್ಲಾ ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್, ಹೆಚ್ಚುವರಿ ಎಸ್‌ಪಿಗಳು ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ.ಜಿ. ಕಾರಿಯಪ್ಪ ಅವರು ಮಾರ್ಗದರ್ಶನ ನೀಡಿದರು. ನಗರ ಉಪ ವಿಭಾಗದ ಡಿವೈಎಸ್‌ಪಿ ಕೆ.ಆರ್. ನಾಗರಾಜ್ ಹಾಗೂ ಸಿಪಿಐ ಶ್ರೀಶೈಲ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಠಾಣೆಯ ಪಿಎಸ್‌ಐ ಟಿ. ರಮೇಶ್ ನೇತೃತ್ವದಲ್ಲಿ ಎಎಸ್‌ಐ ಟಿ.ಪಿ. ಮಂಜಪ್ಪ, ಸಿ.ಎಚ್.ಸಿ. ನವೀನ್ ಮತ್ತು ಸಿಪಿಸಿ ನಾಗರಾಜ್ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.
ತಪಾಸಣೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಅವನಿಂದ ಕಳವಾದ ಆಭರಣಗಳು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ಇನ್ನಷ್ಟು ಮಾಹಿತಿ ಸಂಗ್ರಹಿಸಲು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…