Latest

ಭಾರತಿ ಶೆಟ್ಟಿಯ ಧ್ವನಿ ವಿವಾದಕ್ಕೆ ಕಾರಣ: ವ್ಯವಹಾರದಲ್ಲಿ ಧರ್ಮ ಆಧಾರಿತ ಕರೆ!”

ಬೆಳ್ತಂಗಡಿ, ಮೇ 13 – ಬೆಳ್ತಂಗಡಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಭಾಷಣದಿಂದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಗುರುವಾಯನಕೆರೆಯಲ್ಲಿ ನಡೆದ ಈ ಕಾರ್ಯಕ್ರಮದ ವೇಳೆ ಅವರು ಮಾಡಿದ ಮತಭೇದ ಉಣಡುವ ಹೇಳಿಕೆಯ ವಿಡಿಯೋ ಇದೀಗ ಹರಿದಾಡುತ್ತಿದೆ.

‘ಸಾಯಿರಾಮ್ ಫ್ರೆಂಡ್ಸ್ ಗುರುವಾಯನಕೆರೆ’ ಎಂಬ ಸಂಘಟನೆ ಆಯೋಜಿಸಿದ್ದ “ಸುಹಾಸ್ ಶೆಟ್ಟಿ ನುಡಿನಮನ” ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾರತಿ ಶೆಟ್ಟಿ ಮಾತನಾಡುತ್ತಾ, “ಸರಕಸರಿಗೆ ದರ ಜಾಸ್ತಿಯಾದರೂ ನಾವು ನಮ್ಮವರ ಅಂಗಡಿಗಳಿಂದಲೇ ಖರೀದಿ ಮಾಡಬೇಕು. ಅದು ನಮ್ಮ ಸಮುದಾಯದ ಶಕ್ತಿ ವೃದ್ಧಿಗೆ ಕಾರಣವಾಗುತ್ತದೆ. ದರ ಕಡಿಮೆಯೋ ಅಥವಾ ಮಾತು ಸಿಹಿಯೋ ಎಂಬ ಕಾರಣಕ್ಕೆ ಇತರ ಸಮುದಾಯದ ಅಂಗಡಿಗಳ ಕಡೆ ಹೋಗಬಾರದು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅದಕ್ಕೂ ಮೀರಿದ ಹೇಳಿಕೆಯೊಂದರಲ್ಲಿ ಅವರು, “ಗುರುವಾಯನಕೆರೆ ಪೇಟೆಯಲ್ಲಿ ಮುಸ್ಲಿಂ ರಿಕ್ಷಾ ಚಾಲಕರ ಪ್ರಮಾಣ ಹೆಚ್ಚಾಗಿದೆ. ಬೆಳಿಗ್ಗೆ ಆಗುವ ವೇಳೆಗೆ ಹಿಂದೂ ಚಾಲಕರು ಕಾಣೆಯೇ ಆಗುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ನಮ್ಮವರು ಹೆಚ್ಚು ಸಕ್ರಿಯರಾಗಬೇಕಾಗಿದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ಮುಖಂಡ ನವೀನ್ ನೆರಿಯಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಭಾರತಿ ಶೆಟ್ಟಿಯ ಈ ಹೇಳಿಕೆ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಸಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಏನೆಂದು ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನಿರೀಕ್ಷಿಸಲಾಗಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

4 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

4 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

5 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

5 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

6 hours ago