ಮೊದಲ ಹಂತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಉದ್ದೇಶದಿಂದ ಬಳ್ಳಾರಿ ನಗರದ ಗಾಂಧಿನಗರ 22ನೇ ವಾರ್ಡ್‌ನ ಸೊಂತ ಲಿಂಗಣ್ಣ ಕಾಲೋನಿಯ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ (07-07-2026) ಭೂಮಿ ಪೂಜೆ ನೆರವೇರಿಸಲಾಯಿತು.

ಸುಮಾರು ₹79.36 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಅಭಿವೃದ್ಧಿ ಕಾಮಗಾರಿಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ, 22ನೇ ವಾರ್ಡ್‌ನ ಕಾರ್ಪೊರೇಟರ್ ಹನುಮಂತಪ್ಪ, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪಾರ್ಕ್ ಅಭಿವೃದ್ಧಿ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಉತ್ತಮ ಸಾರ್ವಜನಿಕ ಸೌಲಭ್ಯಗಳು ದೊರೆಯಲಿದ್ದು, ಮಕ್ಕಳ ಆಟದ ವ್ಯವಸ್ಥೆ, ಹಸಿರು ವಾತಾವರಣ ಹಾಗೂ ವಾಯುವಿಹಾರಕ್ಕೆ ಅನುಕೂಲಕರ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನಪ್ರತಿನಿಧಿಗಳು ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಭರವಸೆ ವ್ಯಕ್ತಪಡಿಸಿದರು.

ವರದಿ: ಹನುಮಂತ

Related News

error: Content is protected !!