Latest

ಭುವನೇಶ್ವರ: ಪುರಿಯಲ್ಲಿ ಕ್ರೂರ ದಾಳಿ, 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಮೂವರು ಯುವಕರು

ಭುವನೇಶ್ವರ, ಜುಲೈ 19: ಒಡಿಶಾದ ಪುರಿ ಜಿಲ್ಲೆಯ ಬಾಲಂಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಭಯಾನಕ ಘಟನೆ ನಡೆಯಿದ್ದು, ಅಲ್ಪಸಂಖ್ಯಾತ ಸಮುದಾಯದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರ ಗುಂಪು ದಾಳಿ ನಡೆಸಿದ್ದು, ಆಕೆಗೆ ಬೆಂಕಿ ಹಚ್ಚಿದ ಘೋರ ಪ್ರಕರಣ ಬೆಳಕಿಗೆ ಬಂದಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಬಾಲಕಿಯನ್ನು ಭುವನೇಶ್ವರದ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಾಲಕಿ ಶನಿವಾರ ಬೆಳಗ್ಗೆ ತನ್ನ ಸ್ನೇಹಿತೆಯ ಮನೆಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ಯುವಕರು ಆಕೆಯ ಬಾಯಿಗೆ ಕರ್ಚೀಪ್ ಬಿಗಿದು ಅಪಹರಿಸಿದ್ದಾರೆ. ಬಳಿಕ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದು, ಸೀಮೆಎಣ್ಣೆ ಅಥವಾ ಅದಕ್ಕೆ ಸಮಾನ ದ್ರಾವಣದೊಂದಿಗೆ ಬೆಂಕಿ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಆಕೆ ಜೀವ ಉಳಿಸಲು ಪಲಾಯನ ಮಾಡಿದ್ದು, ಸಮೀಪದ ಹಳ್ಳಿಗೆ ಓಡಿ ಹೋಗಿ ಸಹಾಯಕ್ಕಾಗಿ ಕೂಗಿದ್ದಾರೆ.

ಸ್ಥಳೀಯ ನಿವಾಸಿ ದುಃಖಿಶ್ಯಾಮ್ ಸೇನಾಪತಿ ಬಾಲಕಿಯ ಕೂಗಾಟ ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿ ಆಕೆಯನ್ನು ರಕ್ಷಿಸಿದ್ದಾರೆ. ಆತನ ಮನೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದ್ದು, ಹೊಸ ಬಟ್ಟೆಗಳನ್ನು ಒದಗಿಸಿದ್ದಾರೆ.

ಮೂವರು ಯುವಕರು ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಬೆಂಕಿ ಹಚ್ಚಿರುವುದಾಗಿ ಆಕೆ ತಿಳಿಸಿದ್ದಾಳೆ” ಎಂದು ವಿವರಿಸಿದರು.

ಪೊಲೀಸ್ ಇಲಾಖೆಯು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಆರಂಭಿಸಿದ್ದು, ಪುರಿ ಜಿಲ್ಲೆಯ ಹಂಗಾಮಿ ಎಸ್‌ಪಿ ಹಾಗೂ ಡಿಐಜಿ ಪಿನಾಕ್ ಮಿಶ್ರಾ ನೇತೃತ್ವದ ವಿಶೇಷ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಘಟನೆ ನಡೆದ ಸ್ಥಳದಲ್ಲಿ ಎರಡು ಬಾಟಲ್‌ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಸೀಮೆಎಣ್ಣೆಯ ಸುಳಿವು ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪೂರ್ವನಿಯೋಜಿತ ಕ್ರೂರ ಕೃತ್ಯ ಎನ್ನುವ ಶಂಕೆಯೂ ವ್ಯಕ್ತವಾಗಿದೆ.

ಘಟನೆಯು ರಾಜ್ಯಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಕೂಗು ಎದ್ದಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago