ಮಂಡ್ಯ: ಗಾಂಜಾ ಬೆಳೆಯುವುದು ಕಾನೂನು ಪ್ರಕಾರ ಅಪರಾಧವಾಗಿರುವುದಾದರೂ, ಕೆಲವರು ಇದನ್ನು ಪತ್ತೆಗೊಮ್ಮಲು ಮಾಡಿಕೊಳ್ಳುವ ಪ್ರಯತ್ನದಲ್ಲಿ ಇದರ ಬೆಳವಣಿಗೆಯನ್ನು ನಡೆಸುತ್ತಾರೆ. ಇತ್ತೀಚೆಗೆ, ಮಂಡ್ಯ ಜಿಲ್ಲೆಯ ಹಳೇಹಳ್ಳಿ ಗ್ರಾಮದಲ್ಲಿ ಗಾಂಜಾ ಬೆಳೆಸಿದ ಪ್ರಕರಣ ಬೆಳಕಿಗೆ ಬಂದಿದೆ.
ಮದ್ದೂರು ತಾಲೂಕಿನ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬ ವ್ಯಕ್ತಿ ತನ್ನ ಮನೆ ಮೇಲಿನ ತಾರಸಿ ಮೇಲೆ ಪ್ಲಾಸ್ಟಿಕ್ ಪಾಟಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದನು.
ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ನೇತೃತ್ವದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ 3 ಕೆಜಿ 664 ಗ್ರಾಂ ಗಾಂಜಾ ಸೊಪ್ಪನ್ನು ವಶಪಡಿಸುಕೊಂಡಿದ್ದಾರೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 20(1)(i)ನಡಿ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಕ್ರಮ ಮುಂದುವರಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…