Latest

ಇನ್ಶೂರೆನ್ಸ್ ಇಲ್ಲದೆ ಸಂಚರಿಸುತ್ತಿರುವ ವಾಹನ ಮಾಲೀಕರಿಗೆ ಬಿಗ್ ಶಾಕ್

ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ಇನ್ಶೂರೆನ್ಸ್ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ಇನ್ಶೂರೆನ್ಸ್ ಮಾಡಿಸುವ ಬಹಳಷ್ಟು ವಾಹನ ಮಾಲೀಕರು ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ಅಪಘಾತಗಳು ನಡೆದ ಸಂದರ್ಭದಲ್ಲಿ ಅಂತಹ ವಾಹನಗಳ ಮಾಲೀಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ. ಅಷ್ಟಾದರೂ ಕೂಡಾ ಇನ್ಶೂರೆನ್ಸ್ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ.
ಯಾವ ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಇನ್ಶೂರೆನ್ಸ್ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ಇನ್ಶೂರೆನ್ಸ್ ರಿನಿವಲ್ ಮಾಡದ ಮಾಲೀಕರಿಗೆ ದಂಡ ವಿಧಿಸುವ ಸಾಧ್ಯತೆಯೂ ಇದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago