ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ್ ಸರ್ಕಲ್ ಬಳಿ ದ್ವಿಚಕ್ರ ವಾಹನ ಮತ್ತು ಪೊಲೀಸ್ ಜೀಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟವರು ಕೆಜಿಎಫ್ ತಾಲ್ಲೂಕಿನ ಬಡಮಾಕನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂದು ಗುರುತಿಸಲಾಗಿದೆ. ಅವರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ, ಕೋಲಾರ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಯಾಣಿಸುತ್ತಿದ್ದ ಬೊಲೆರೋ ಪೊಲೀಸ್ ವಾಹನ ಬೈಕ್‌ಗೆ ಬಲವಾಗಿ ಗುದ್ದಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ನಾರಾಯಣಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದರು.
ಘಟನೆಯ ಬಗ್ಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…