ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದು ಸಂಜೆ ನಡೆಯಿದ ಸರಗಳ್ಳತನದ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇಕ್ಕೇರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 60 ವರ್ಷದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ಕಸಿದು ಪರಾರಿಯಾಗಿದ್ದಾರೆ.
ಕೂಲಿ ಕೆಲಸ ಮುಗಿಸಿಕೊಂಡು ಜನ್ನತ್ ನಗರದ ತಮ್ಮ ಮನೆಗೆ ನಡೆಯುತ್ತಿದ್ದ ಸೀತಮ್ಮ ಎಂಬ ಮಹಿಳೆ ಈ ಕೃತ್ಯದ ಶಿಕಾರಾಗಿದ್ದಾರೆ. ಹಿಂಬಾಲಿಸುತ್ತ ಬಂದ ಸ್ಕೂಟರ್‌ನಲ್ಲಿ ಬಂದ ಕಳ್ಳರು, ಎಚ್ಚರಿಕೆಗೂ ಮುನ್ನವೇ ಅವರ ಮಾಂಗಲ್ಯ ಸರವನ್ನು ಎಳೆದು ಪರಾರಿಯಾಗಿದ್ದಾರೆ. ಮಹಿಳೆಯ ಹೇಳಿಕೆಗೆ ಅನುಸಾರ, ಕದ್ದೊಯ್ಯಲಾದ ಸರದ ತೂಕ 28 ಗ್ರಾಂ ಆಗಿದೆ.
ಘಟನೆ ಬಗ್ಗೆ ಸಾಗರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳದಲ್ಲಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮೂಲಕ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ಸಾರ್ವಜನಿಕರು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಹಾಗೂ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…