Categories: CrimeLatest

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ.

ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಮತ್ತು ಚಂದ್ರಮ್ಮ ದಂಪತಿಯ ಪುತ್ರಿ ಪೂರ್ವಿಕ (16) ಮೃತ ಬಾಲಕಿಯಾಗಿದ್ದಾಳೆ. ಆಕೆ ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದು, ತಗಡೂರು ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಳು.

ಬಸವ ಜಯಂತಿ ಪ್ರಯುಕ್ತ ಕುಟುಂಬದ ನಾಲ್ವರು ಒಂದೇ ಬೈಕ್‌ನಲ್ಲಿ ಸರಗೂರು ತಾಲೂಕಿನ ಪ್ರಸಿದ್ಧ ಶ್ರೀ ಬೇಲದ ಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮರಳುತ್ತಿದ್ದರು. ಈ ವೇಳೆ ಯಡಿಯಾಲ ಸಮೀಪ ಗಣೇಶಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಬೈಕ್‌ನ ಟೈರ್ ಬ್ಲಾಸ್ಟ್ ಆಗಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪೂರ್ವಿಕ ಹಾಗೂ ತಾಯಿ ಚಂದ್ರಮ್ಮ ಅವರನ್ನು ತಕ್ಷಣ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪೂರ್ವಿಕ ಮೃತಪಟ್ಟಿದ್ದಾಳೆ. ತಾಯಿ ಚಂದ್ರಮ್ಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಂದೆ ಮಹದೇವಸ್ವಾಮಿ ಮತ್ತು ಸಹೋದರ ಪ್ರೀತಮ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮೃತದೇಹವನ್ನು ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಯಡಿಯಾಲ ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 hour ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago