Categories: Latest

ತಪ್ಪು ದಾರಿಯಲ್ಲಿ ಬಂದ ಸರ್ಕಾರಿ ಬಸ್‌ಗೆ ಬೈಕ್ ಸವಾರನ ಟಕ್ಕರ್: ಚಾಲಕನಿಂದಲೇ ರಿವರ್ಸ್ ಹಾಕಿಸಿದ ಸಾಹಸ

ಸಾರ್ವಜನಿಕ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ, ಹೈದರಾಬಾದ್‌ನಲ್ಲಿ ನಡೆದ ಘಟನೆೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತಪ್ಪು ದಾರಿಯಲ್ಲಿ ಬಂದ ಸರ್ಕಾರಿ ಬಸ್‌ಗೆ ಬೈಕ್ ಸವಾರನೊಬ್ಬ ದಾರಿ ಬಿಡದೆ, ಕೊನೆಗೆ ಬಸ್ ಚಾಲಕನನ್ನೇ ಸರಿಯಾದ ಲೇನ್‌ಗೆ ಹಿಂತಿರುಗುವಂತೆ ಮಾಡಿದ ಘಟನೆ ಇದೀಗ ವೈರಲ್ ಆಗಿದೆ.

ವರದಿಗಳ ಪ್ರಕಾರ, ಹೈದರಾಬಾದ್‌ನ ವೇವ್‌ರಾಕ್ ಮತ್ತು ಬಚುಪಲ್ಲಿ ನಡುವಿನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ ಸರ್ಕಾರಿ ಬಸ್ ಒಂದು ರಸ್ತೆಯ ತಪ್ಪು ಬದಿಯಲ್ಲಿ ಚಲಿಸುತ್ತಿರುವುದು ಕಾಣಿಸುತ್ತದೆ. ಇದೇ ವೇಳೆ ತನ್ನ ಸರಿಯಾದ ಲೇನ್‌ನಲ್ಲಿ ಬರುತ್ತಿದ್ದ ಬೈಕ್ ಸವಾರ, ಎದುರುಗಡೆ ಬರುತ್ತಿದ್ದ ಬಸ್ ನೋಡಿ ಹೆದರದೆ ನೇರವಾಗಿ ಬಸ್ ಎದುರಲ್ಲೇ ಬೈಕ್ ನಿಲ್ಲಿಸಿದ್ದಾನೆ.

ಬಸ್ ಚಾಲಕ ನಿರಂತರವಾಗಿ ಹಾರ್ನ್ ಮಾಡುತ್ತಿದ್ದರೂ, ಬೈಕ್ ಸವಾರ ಮಾತ್ರ ಒಂದು ಇಂಚೂ ಹಿಂದೆ ಸರಿಯದೆ ಬಸ್‌ಗೆ ದಾರಿ ಬಿಡಲು ನಿರಾಕರಿಸಿದ್ದಾನೆ. ಕೆಲಕಾಲ ರಸ್ತೆ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿದ್ದವರು ಕೂಡ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ.

ಕೊನೆಗೆ ಪರಿಸ್ಥಿತಿಗೆ ಮಣಿದ ಬಸ್ ಚಾಲಕ ವಾಹನವನ್ನು ಹಿಮ್ಮುಖವಾಗಿ ಚಲಾಯಿಸಿ, ಸರಿಯಾದ ಲೇನ್‌ಗೆ ಮರಳಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಬೈಕ್ ಸವಾರನ ಧೈರ್ಯ ಮತ್ತು ಸಂಚಾರ ನಿಯಮಗಳ ಬಗ್ಗೆ ತೋರಿದ ಜಾಗೃತಿಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಪ್ಪು ದಾರಿಯಲ್ಲಿ ವಾಹನ ಚಲಾಯಿಸುವುದು ಅಪಘಾತಗಳಿಗೆ ಕಾರಣವಾಗಬಹುದು. ಇಂತಹ ಉಲ್ಲಂಘನೆಗಳನ್ನು ಸಹಿಸಿಕೊಂಡರೆ ರಸ್ತೆಗಳಲ್ಲಿ ಅಜಾಗರೂಕ ಚಾಲನೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ರಸ್ತೆ ಸುರಕ್ಷತಾ ನಿಯಮಗಳು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಎಂಬ ಸಂದೇಶವನ್ನು ಈ ಘಟನೆ ಮತ್ತೆ ನೆನಪಿಸಿದೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

38 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago