Latest

ಕಬ್ಬು ಮಾರಾಟಕ್ಕೆ ರೈತ-ಸಕ್ಕರೆ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಕಡ್ಡಾಯ

ಕಲಬುರಗಿ:  ಸಕ್ಕರೆ ಕಾರ್ಖಾನೆ ಮತ್ತು ರೈತರೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿ.ಸಿ. ಯಶವಂತ ವಿ. ಗುರುಕರ, ಕಬ್ಬು ನಿಯಂತ್ರಣ ಆದೇಶ-1966ರ ನಿಯಮ 6ರ ಪ್ರಕಾರ ದ್ವಿಪಕ್ಷೀಯ ಒಪ್ಪಂದ ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಕಬ್ಬು ಬೆಳೆಯುವ ರೈತರು ಅದನ್ನು ಮಾರಾಟ ಮಾಡುವ ಸಕ್ಕರೆ ಕಾರ್ಖಾನೆಗಳೊಂದಿಗೆ ಎಫ್.ಆರ್.ಪಿ. ದರದನ್ವಯ ಮಾರಾಟ ಮಾಡಲು ಮತ್ತು ಸಕ್ಕರೆ ಆಯುಕ್ತರ ಆದೇಶದಂತೆ ಪ್ರತಿ ಕಿ.ಮೀ. ಅನ್ವಯ ಸಾರಿಗೆ ಮತು ಕಟಾವಿನ ವೆಚ್ಚ ಕಡಿತದೊಂದಿಗೆ ಹಣ ಪಾವತಿಸುವ ಷರತ್ತಿಗೊಳಪಟ್ಟು ದ್ವಿಪಕ್ಷೀಯ ಒಪ್ಪಂದ ಮಾಡುವುದು ಕಡ್ಡಾಯವಾಗಿದ್ದು, ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಥಮವಾಗಿ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ರೈತರ ಸಹಮತದೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದೆ. ಒಪ್ಪಂದದ ನಮೂನೆಯನ್ನು ಡಿ.ಸಿ. ಕಚೇರಿಯಿಂದಲೆ ತಯಾರಿಸಿ ತಹಶೀಲ್ದಾರರ ಮೂಲಕ ರೈತರಿಗೆ ಮತ್ತು ಕಾರ್ಖಾನೆಗಳಿಗೆ ನೀಡಲಾಗುವುದು ಎಂದರು ಒಪ್ಪಂದಕ್ಕೆ ಸಹಿ ಹಾಕಲು ರೈತರಲ್ಲಿ ಮನವಿ ಮಾಡಿದ್ದರು.
ಕಬ್ಬು ಬೆಳೆಗಾರರ ಅನೇಕ ಸಮಸ್ಯೆಗಳಿಗೆ ಒಮ್ಮೆಲೆ ತಿಲಾಂಜಲಿ ನೀಡಲು ರೈತರು ಬೆಳೆದ ಕಬ್ಬನ್ನು ಸಕಾಲದಲ್ಲಿ ಕಟಾವು ಮಾಡಿಕೊಂಡು ಹೋಗಲು ಆಯಾ ಸಕ್ಕರೆ ಕಾರ್ಖಾನೆಗಳಿಂದ ಪ್ರದೇಶವಾರು ಇಬ್ಬರು ಸಿಬ್ಬಂದಿಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ ಇಂದು ನಡೆಸಿದ ರೈತರು ಮತ್ತು ಸಕ್ಕರೆ ಕಾರ್ಖಾನೆ ನಡುವಿನ ಸಭೆ ಫಲಪ್ರಧವಾಗಿದ್ದು, ಕಬ್ಬು ಬೆಳೆಗಾರರ ಹಿತದಲ್ಲಿ ಜಿಲ್ಲೆಯ ಮಟ್ಟಿಗೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಕಂಪನಿಗಳಲ್ಲಿ ಲಂಚಾವತಾರಕ್ಕೆ ಬ್ರೇಕ್ ಬೀಳಲಿದ್ದು, ಅನ್ನದಾತ ರೈತನಿಗೆ ಕಿರಿಕಿರಿ ತಪ್ಪಲಿದೆ. ಒಪ್ಪಂದದಂತೆ ಕಾಲಮಿತಿಯಲ್ಲಿ ಹಣ ಸಿಗಲಿದೆ. ಪರಿಹಾರ ಕೊಟ್ಟಿಲ್ಲ, ಕಬ್ಬು ಕಟಾವಾಗಿಲ್ಲ ಎನ್ನುವ ದೂರುಗಳು ಇನ್ನು ಮುಂದೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದು ಯಶವಂತ ವಿ. ಗುರುಕರ್ ವಿವರಿಸಿದರು.

ಕಬ್ಬು ಕಟಾವು ಮಾಡುವ ಮುನ್ನ ಗ್ರಾಮಸ್ಥರಿಗೆ ಮೊದಲೇ ಮಾಹಿತಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಮೊಬೈಲ್ ತಂತ್ರಾಂಶ ಸಹ ಸಿದ್ಧಪಡಿಸಲಾಗುತ್ತಿದೆ. ಇನ್ನೂ ಕಬ್ಬು ತೂಕದ ದೂರುಗಳ ನಿವಾರಣೆಗೆ ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ 2 ರ್ಯಾಪಿಡ್ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ ಇದೇ ಇಲಾಖೆಯಡಿ ಕಬ್ಬು ಕಟಾವು ಮತ್ತು ಮಾರಾಟ ಕುರಿತಂತೆ ರೈತರು ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ. ರೈತರು ದೂರು ಸಲ್ಲಿಸಿದ 24 ಗಂಟೆಯಲ್ಲಿ ಅಧಿಕಾರಿಗಳ ತಂಡ ಹೊಲಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲಿದೆ ಎಂದರು.
ವರದಿ: ನಾಗರಾಜ್ ಗೊಬ್ಬುರ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago