ನಂಜನಗೂಡು: ವೈದ್ಯ ಲೋಕವೇ ಬೆರಗಾಗುವಂತಹ ವಿಚಿತ್ರ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ
ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ. ವರದಿ: ಮೋಹನ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…