ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ನಡೆದಿದೆ.
ಮಾಹಿತಿಯ ಪ್ರಕಾರ, ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಕಾರಿನಲ್ಲಿ ವಾಪಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪವನ್ ಮತ್ತು ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮತ್ತ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರು ನಿಗಾ ವಹಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಸಂಬಂಧ ಡಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆಗಾಗಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…