Categories: Latest

ವೈರಲ್‌ಗಾಗಿ ವಿಚಿತ್ರ ಸಾಹಸ! ಕಾಂಡೋಮ್‌ನಿಂದ ಪಕೋಡ ಮಾಡಿ ತಿಂದ ಯುವತಿ; ವಿಡಿಯೋಗೆ ನೆಟ್ಟಿಗರ ತೀವ್ರ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಫಾಲೋವರ್ಸ್‌, ಲೈಕ್ಸ್‌ ಮತ್ತು ವೈರಲ್‌ ಖ್ಯಾತಿ ಗಳಿಸುವ ಹುಚ್ಚು ಕೆಲವರನ್ನು ವಿಚಿತ್ರ ಹಾಗೂ ವಿವಾದಾತ್ಮಕ ಕೃತ್ಯಗಳತ್ತ ತಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದೀಗ ಯುವತಿಯೊಬ್ಬಳು ಕಾಂಡೋಮ್‌ ಬಳಸಿ ಪಕೋಡ ತಯಾರಿಸಿ ಅದನ್ನು ತಿನ್ನುವ ವಿಡಿಯೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿ ಕಾಂಡೋಮ್‌ಗಳನ್ನು ಹಿಟ್ಟಿನಲ್ಲಿ ಅದ್ದಿ ಎಣ್ಣೆಯಲ್ಲಿ ಕರಿದು ಪಕೋಡದಂತೆ ತಯಾರಿಸುತ್ತಾಳೆ. ಬಳಿಕ ಅದಕ್ಕೆ ಸಾಸ್‌ ಹಚ್ಚಿಕೊಂಡು ತಿನ್ನುತ್ತಾ, “ಇದು ತುಂಬಾ ಕ್ರಂಚಿಯಾಗಿದೆ” ಎಂದು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಈ ದೃಶ್ಯ ಅನೇಕ ಮಂದಿಯನ್ನು ಅಚ್ಚರಿಗೊಳಿಸಿದ್ದು, ಕೆಲವರು ಅಸಹ್ಯ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದಂತೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ಆಗುವ ಉದ್ದೇಶಕ್ಕಾಗಿ ಇಂತಹ ವಿಚಿತ್ರ ಪ್ರಯೋಗಗಳನ್ನು ಮಾಡುವ ಪ್ರವೃತ್ತಿಯನ್ನು ಹಲವರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯಲು ಜನರು ಯಾವ ಮಟ್ಟಕ್ಕೂ ಹೋಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

3 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

3 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

3 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago

ವಡ್ಡಗೆರೆ ವೀರನಾಗಮ್ಮ ದೇವಸ್ಥಾನ ಸೇರಿದಂತೆ 9 ದೇವಸ್ಥಾನಗಳಲ್ಲಿ ಕಳ್ಳತನ: ಅಂತಾರಾಜ್ಯ ಕಳ್ಳರ ಬಂಧನ, 21 ಕೆಜಿ ಬೆಳ್ಳಿ ಆಭರಣ ವಶ

ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಿದ ಶೂ–ಸ್ಯಾಂಡಲ್ ಕಳಪೆ? ಸೆ.18ರೊಳಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್‌ಗಳ…

4 days ago