ಕಲಬುರಗಿ: ಜಿಲ್ಲೆ ಮತ್ತು ಯಾದಗಿರಿ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡರನ್ನು ಒಂದು ವರ್ಷ ಕಾಲ ಗಡಿಪಾರು ಮಾಡಿದ್ದಾರೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್ ರವಿಕುಮಾರ ಆದೇಶ ಹೊರಡಿಸಿದ್ದಾರೆ ಅಕ್ರಮ‌ ಪಡಿತರ ಅಕ್ಕಿ ಸಾಗಣೆ ಸೇರಿದಂತೆ ಕಲಬುರಗಿ ಯಾದಗಿರಿ ಜಿಲ್ಲೆಗಳಲ್ಲಿ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಠೋಡ ಎದುರಿಸುತ್ತಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಪಡೆದು ಹೊರಬಂದ ನಂತರವು ಮತ್ತೆ ಅದೇ ಕಾರ್ಯವನ್ನು ಮುಂದುವರೆಸಿದ್ದ ಎಂದು ಹಲವು ದಿನಗಳಿಂದ ಸಂಘಟನೆಗಳು ಆಗ್ರಹಿಸಿದ್ದವು.ಈ ಹಿನ್ನೆಲೆಯಲ್ಲಿ ಕಲಬುರಗಿಯಿಂದ್ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ. ಗಡಿಪಾರಿಗೆ ಐದು ದಿನ ಕಾಲಾವಕಾಶ ನೀಡಲಾಗಿದೆ.

Related News

error: Content is protected !!