Latest

ಅಶ್ಲೀಲ ವೀಡಿಯೋ ಕಳುಹಿಸಿದ್ದ ಬಿಜೆಪಿ ನಾಯಕನಿಗೆ, ಮಹಿಳಾ ಕಾರ್ಯಕರ್ತರಿಂದ ಚಪ್ಪಲಿ ಏಟು.!

ಲಖನೌ, ಜುಲೈ 15 – ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳಾ ಕಾರ್ಯಕರ್ತರಿಗೆ ಅಶ್ಲೀಲ ವೀಡಿಯೋಗಳನ್ನು ಕಳುಹಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಸತತ ಕಿರುಕುಳದಿಂದ ಸಿಟ್ಟುಗೊಂಡ ಮಹಿಳೆಯರು ಆತನಿಗೆ ಚಪ್ಪಲಿಯಿಂದ ಹೊಡೆದು ಬುದ್ಧಿ ಕಲಿಸಿದ್ದ ವೈರಲ್ ಆಗಿದೆ.

ಆಗ್ರಾ ಜಿಲ್ಲೆಯ ಖಂಡೌಲಿ ಪ್ರದೇಶದ ನಿವಾಸಿಯಾಗಿರುವ ಆನಂದ್ ಶರ್ಮಾ ಎಂಬಾತ ಮಹಿಳಾ ಕಾರ್ಯಕರ್ತರಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳು ಹಾಗೂ ವೀಡಿಯೋಗಳನ್ನು ಕಳುಹಿಸುತ್ತಿದ್ದನು. ಇದರಿಂದ ತೀವ್ರ ಮಾನಸಿಕ ಬಳಲಿಗೆ ಒಳಗಾದ ಮಹಿಳೆಯರು ಕೊನೆಗೆ ತಾವೇ ನ್ಯಾಯ ಕೈಗೆತ್ತಿಕೊಂಡಿದ್ದಾರೆ.

ಹೆಸರು ಬಹಿರಂಗಗೊಳಿಸದಿರುವ ಮಹಿಳಾ ಕಾರ್ಯಕರ್ತರೊಬ್ಬರು ಆತ ದಿನದಿಂದ ದಿನಕ್ಕೆ ಅಶ್ಲೀಲ ಕಂಟೆಂಟ್ ಕಳುಹಿಸುತ್ತಿದ್ದನೆಂದು ಹೇಳಿದ್ದಾರೆ. ಕೆಲ ಮಹಿಳೆಯರು, ಆನಂದ್‌ ತನ್ನ ಮುಖ ಮುಚ್ಚಿಕೊಂಡು ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಕಳುಹಿಸುತ್ತಿದ್ದನೆಂಬ ಆರೋಪವೂ ಮಾಡಿದ್ದಾರೆ. ಇದು ಪಕ್ಷದ ಮೌಲ್ಯಗಳಿಗೆ ಧಕ್ಕೆಯಾದಂತೆ ಆಗಿದ್ದು,  ಕಾರ್ಯಕರ್ತರಲ್ಲಿ ಆಕ್ರೋಶ ಹುಟ್ಟಿಸಿದೆ.

ಘಟನೆಯ ದಿನ ಮಹಿಳೆಯರು ಆನಂದ್‌ನ ಮನೆಗೆ ನುಗ್ಗಿ, ಆತನನ್ನು ಹೊರಗೆಳೆದು ಮಾರುಕಟ್ಟೆಯ ಮಧ್ಯೆ ಚಪ್ಪಲಿಯಿಂದ ಥಳಿಸಿದರು. ಈ ವೇಳೆ ಆನಂದ್ ಪತ್ನಿ ಹಾಗೂ ಸಂಬಂಧಿಕರು ಮಧ್ಯಪ್ರವೇಶಿಸಿ ಮಹಿಳೆಯರಲ್ಲಿ ಕ್ಷಮೆಯಾಚಿಸಿದರು. ಕೊನೆಗೆ ಆನಂದ್ ಶರ್ಮಾ ಆತಂಕದಿಂದ ನಿಶ್ಶಬ್ದನಾಗಿ ಅಲ್ಲಿಂದ ಹೊರಟನು.

ವೈರಲ್ ಆಗಿರುವ ಈ ವಿಡಿಯೋವನ್ನು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಉಪ್ಮಾ ಗುಪ್ತಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡು, “ಮಹಿಳಾ ಕಾರ್ಯಕರ್ತರ ಕಿರುಕುಳದ ವಿರುದ್ಧ ತಕ್ಕ ಪ್ರತಿಕ್ರಿಯೆ ನೀಡಲಾಗಿದೆ” ಎಂದು ಹೇಳಿಕೆ ನೀಡಿದ್ದಾರೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago