Latest

ಆರ್ಥಿಕ ವಂಚನೆ ಹಾಗೂ ಮಾನಸಿಕ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಆರೋಪಿಗಳ ವಿರುದ್ಧ ಉಲ್ಕೊಂಡ ವೀಡಿಯೋ ವೈರಲ್.!

ಬೆಂಗಳೂರು: ಅನೇಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಆರ್ಥಿಕ ವಂಚನೆ ಮತ್ತು ಮಾನಸಿಕ ಕಿರುಕುಳದಿಂದ ತತ್ತರಿಸಿ ಜೀವನದ ಕ್ಷಣಿಕ ನಿರ್ಣಯ ಮಾಡಿಕೊಂಡ ದುರ್ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯೊಂದರ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟುಮಾಡಿದೆ.

ಮೃತ ಯುವಕನನ್ನು ಪ್ರವೀಣ್ ಗೌಡ ಬೇಲೂರು (35) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ನಲ್ಲಿ ಆತ ಸ್ವಪಕ್ಷದ ಕೆಲವರು ತಾನು ಅನುಭವಿಸಿದ ಅನ್ಯಾಯಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ವೀಡಿಯೋ ಸಂದೇಶವೊಂದನ್ನು ಅಪ್‌ಲೋಡ್ ಮಾಡಿದ್ದಾನೆ.

ವೀಡಿಯೋದಲ್ಲಿ ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಹಾಗೂ ಸರವಣ ಎಂಬುವವರು ತಾನು ಅನುಭವಿಸಿದ ಕಿರುಕುಳ ಹಾಗೂ ಹಣ ವಂಚನೆಗೆ ಹೊಣೆಗಾರರು ಎಂದು ತಿಳಿಸಿದ್ದಾನೆ. “ಕಳೆದ ಎರಡು ತಿಂಗಳಿನಿಂದ ತೀವ್ರ ಮಾನಸಿಕ ಒತ್ತಡ ಅನುಭವಿಸುತ್ತಿದ್ದೇನೆ. ಕಿರಣ್ ಗೌಡನನ್ನು ಮಾತ್ರ  ತಪ್ಪಿಸಬಾರದು” ಎಂದು ಕಳವಳಭರಿತ ಮನವಿಯನ್ನೂ ಮಾಡಿದಿದ್ದಾರೆ.

ಅಲ್ಲದೆ, ಕಿರಣ್ ಗೌಡ ಮಹಿಳೆಯರಿಗೆ ಅಹಿತಕರ ರೀತಿಯಲ್ಲಿ ಕರೆಮಾಡಿ ಕಿರುಕುಳ ನೀಡುತ್ತಿದ್ದಾನೆ ಮತ್ತು ತನ್ನ ಮೇಲೆಯೂ ಅನಾಚಾರ ವರ್ತನೆ ತೋರಿದ್ದಾನೆ ಎಂದು ಆರೋಪಿಸಿದ್ದಾನೆ. ಹಣ ಹಿಂತಿರುಗಿಸುವ ನೆಪದಲ್ಲಿ ಭೇಟಿಗೆ ಕರೆದೊಯ್ದು ಹಲ್ಲೆಗೊಳಪಡಿಸಿದ್ದ ಘಟನೆ ಬಗ್ಗೆ ಕೂಡಾ ವಿಸ್ತೃತವಾಗಿ ವಿಡಿಯೋದಲ್ಲಿ ವಿವರಿಸಿದ್ದಾನೆ.

ಈ ಘಟನೆ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮೃತ ಯುವಕನ ವಿಡಿಯೋ ಹೇಳಿಕೆ ಆಧಾರದ ಮೇಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ತಯಾರಿ ನಡೆಸಿದ್ದಾರೆ.

ಸ್ಥಳೀಯರು, ಕುಟುಂಬಸ್ಥರು ಹಾಗೂ ಪಕ್ಷದ ಕೆಲವರು ಈ ವಿಷಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

23 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago